ಎನ್‌ಐಎಯಿಂದ ದಾವೂದ್ ಇಬ್ರಾಹಿಂ ಮಾಹಿತಿ ನೀಡಿದವರಿಗೆ 25 ಲಕ್ಷ ಬಹುಮಾನ
ನವದೆಹಲಿ, ಸೆಪ್ಟೆಂಬರ್ 01: ಜಾಗತಿಕ ಭಯೋತ್ಪಾದಕ ದಾವೂದ್ ಇಬ್ರಾಹಿಂ ಬಗ್ಗೆ ಮಾಹಿತಿ ನೀಡಿದವರಿಗೆ ₹ 25 ಲಕ್ಷ ಬಹುಮಾನ ನೀಡುವುದಾಗಿ ಭಾರತದ ರಾಷ್ಟ್ರೀಯ ತನಿಖಾ ಸಂಸ್ಥೆ ಘೋಷಿಸಿದೆ.
ಈ ಹಿನ್ನೆಲೆಯಲ್ಲಿ ದಾವೂದ್ ಹೊಸ ಫೋಟೋವನ್ನು ಬಿಡುಗಡೆ ಮಾಡಿದೆ. ಅಲ್ಲದೆ ರಾಷ್ಟ್ರೀಯ ತನಿಖಾ ಸಂಸ್ಥೆ ಎನ್‌ಐಎ, ದಾವೂದ್ ಇಬ್ರಾಹಿಂನ ಸಹಚರ ಛೋಟಾ ಶಕೀಲ್ ಮಾಹಿತಿ ನೀಡಿದವರಿಗೂ ₹ 20 ಲಕ್ಷ ಬಹುಮಾನವನ್ನು ಘೋಷಿಸಿದೆ. ಇತರ ಭಯೋತ್ಪಾದಕರಾದ ಅನೀಸ್ ಇಬ್ರಾಹಿಂ, ಜಾವೇದ್ ಚಿಕ್ನಾ ಮತ್ತು ಟೈಗರ್ ಮೆಮನ್ ಮಾಹಿತಿ ನೀಡಿದವರಿಗೆ ತಲಾ ₹ 15 ಲಕ್ಷ ಬಹುಮಾನವನ್ನು ಘೋಷಿಸಿದೆ.
ದಾವೂದ್ ಇಬ್ರಾಹಿಂ ಮತ್ತು ಇತರರು ಅಂತಾರಾಷ್ಟ್ರೀಯ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ, ಜೈಶ್-ಎ-ಮೊಹಮ್ಮದ್ ಮತ್ತು ಅಲ್ ಖೈದಾದೊಂದಿಗೆ ಸಕ್ರಿಯ ಸಹಯೋಗದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಎನ್ಐಎ ಹೇಳಿಕೆಯಲ್ಲಿ ತಿಳಿಸಿದೆ.
1993ರ ಮುಂಬೈ ಬಾಂಬ್ ಸ್ಫೋಟದ ರೂವಾರಿ ದಾವೂದ್ ಇಬ್ರಾಹಿಂ ಮತ್ತು ವಿಶ್ವಸಂಸ್ಥೆಯಿಂದ ಗೊತ್ತುಪಡಿಸಿದ ಇತರ ಭಯೋತ್ಪಾದಕರು ನೆರೆಯ ದೇಶದಲ್ಲಿ ಆಶ್ಚರ್ಯಕರವಾಗಿ ಜೀವನ ಮಾಡುತ್ತಿದ್ದಾರೆ ಎಂದು ಭಾರತವು ಕಳೆದ ವರ್ಷ ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ತಿಳಿಸಿದೆ. ಭಯೋತ್ಪಾದನಾ ಬೆದರಿಕೆಗಳನ್ನು ಎದುರಿಸಲು ಅಂತಾರಾಷ್ಟ್ರೀಯ ಪ್ರಯತ್ನಗಳನ್ನು ಕೇಂದ್ರೀಕರಿಸಲು ಕರೆ ನೀಡಿದೆ. ಲಷ್ಕರ್-ಎ-ತೊಯ್ಬಾ ಮತ್ತು ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಗುಂಪುಗಳು ಮತ್ತು ಮೋಸ್ಟ್ ವಾಂಟೆಡ್ ಗುಂಪುಗಳಲ್ಲಿ ಒಂದಾಗಿವೆ.
ಒಂದು ಸಂಘಟಿತ ಅಪರಾಧ ಸಂಸ್ಥೆಯಾದ ಡಿ-ಕಂಪನಿ, ಚಿನ್ನ ಮತ್ತು ನಕಲಿ ಕರೆನ್ಸಿಗಳನ್ನು ಕಳ್ಳಸಾಗಣೆ ಮಾಡುತ್ತಿದ್ದು, ರಾತ್ರೋರಾತ್ರಿ ಭಯೋತ್ಪಾದಕ ಘಟಕವಾಗಿ ರೂಪಾಂತರಗೊಂಡಿತು. ಇದು 1993ರಲ್ಲಿ ಮುಂಬೈ ನಗರದಲ್ಲಿ ಸರಣಿ ಬಾಂಬ್ ಸ್ಫೋಟಕ್ಕೆ ಕಾರಣವಾಯಿತು. ಈ ದಾಳಿಯಿಂದ 250ಕ್ಕೂ ಹೆಚ್ಚು ಅಮಾಯಕರು ಭೀಕರವಾಗಿ ಹತರಾದರು. ಅಲ್ಲದೆ ಲಕ್ಷಾಂತರ ಡಾಲರ್ ಮೌಲ್ಯದ ಆಸ್ತಿಗೂ ಹಾನಿಯಾಯಿತು ಎಂದು ಭಾರತ ಕಳೆದ ವರ್ಷ ಹೇಳಿಕೆಯಲ್ಲಿ ತಿಳಿಸಿದೆ.

ವಿವಿಧ ಸ್ಥಳಗಳಲ್ಲಿ 12 ಬಾಂಬ್‌ಗಳು ಸ್ಫೋಟ
ದಾವೂದ್ ಇಬ್ರಾಹಿಂ 1993 ರ ಮುಂಬೈ ಸ್ಫೋಟದ ಮಾಸ್ಟರ್ ಮೈಂಡ್ ಆಗಿದ್ದ. ಮುಂಬೈ ನಗರದಾದ್ಯಂತ ವಿವಿಧ ಸ್ಥಳಗಳಲ್ಲಿ 12 ಬಾಂಬ್‌ಗಳು ಸ್ಫೋಟಗೊಂಡವು. 257 ಜನರು ಸಾವನ್ನಪ್ಪಿ, 700 ಕ್ಕೂ ಹೆಚ್ಚು ಜನರು ಗಾಯಗೊಂಡರು. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಮಿತಿಯಿಂದ ಜಾಗತಿಕ ಭಯೋತ್ಪಾದಕರ ಪಟ್ಟಿಯಲ್ಲಿರುವ ದಾವೂದ್ ಇಬ್ರಾಹಿಂ ತನ್ನ ಬಂಧನದಿಂದ ತಪ್ಪಿಸಿಕೊಳ್ಳಲು ಪಾಕಿಸ್ತಾನದಲ್ಲಿ ವಾಸ ಇರುವುದಾಗಿ ಹೇಳಲಾಗಿದೆ.

ಕರಾಚಿ ವಿಳಾಸದಲ್ಲಿ ದಾವೂದ್ ವಾಸ
ವಿಶ್ವಸಂಸ್ಥೆ ಭದ್ರತಾ ಮಂಡಳಿಯು ಬಿಡುಗಡೆ ಮಾಡಿದ ಇತ್ತೀಚಿನ ಭಯೋತ್ಪಾದಕ ಸಂಘಟನೆಗಳು ಮತ್ತು ಭಯೋತ್ಪಾದಕರ ಪಟ್ಟಿಯಲ್ಲಿ ದಾವೂದ್ ಇಬ್ರಾಹಿಂ ಮತ್ತು ಅವನ ಕರಾಚಿ ವಿಳಾಸವನ್ನು ಒಳಗೊಂಡಿರುವಾಗ ಅವನು ಪಾಕಿಸ್ತಾನದಿಂದ ಆಶ್ರಯ ಪಡೆದಿದ್ದಾನೆ ಎಂಬ ಭಾರತದ ಪ್ರತಿಪಾದನೆಯನ್ನು 2018 ರಲ್ಲಿ ದೃಢಪಡಿಸಲಾಯಿತು.

ವಿಶ್ವಾದ್ಯಂತ ಆಡುವ ಆಟಗಳ ಮೇಲೆ ಬೆಟ್ಟಿಂಗ್
ದಾವೂದ್ ತನ್ನ ಸಹೋದರ ಅನೀಸ್ ಮೂಲಕ ಐಪಿಎಲ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಎಂದು ಇಂಡಿಯಾ ಟುಡೇ 2013ರಲ್ಲಿ ದೃಢಪಡಿಸಿತ್ತು. 2018ರಲ್ಲಿ ದಾವೂದ್‌ನ ಸಹಚರರೊಬ್ಬರು ಮಾಧ್ಯಮಗಳು ಉಲ್ಲೇಖಿಸಿದಂತೆ ಡಿ ಕಂಪನಿಯು ವಿಶ್ವಾದ್ಯಂತ ಆಡುವ ಎಲ್ಲಾ ಮೂರನೇ ಎರಡರಷ್ಟು ಆಟಗಳಲ್ಲಿ ಬೆಟ್ಟಿಂಗ್‌ನಲ್ಲಿ ತೊಡಗಿಸಿಕೊಂಡಿದೆ ಎಂದು ದೃಢಪಡಿಸಿದ್ದರು.

ಭಯೋತ್ಪಾದಕ ಸಂಘಟನೆಗಳೊಂದಿಗೆ ಸಕ್ರಿಯ ಸಹಯೋಗ
ದಾವೂದ್ ಶಸ್ತ್ರಾಸ್ತ್ರ ಕಳ್ಳಸಾಗಣೆ, ಭಯೋತ್ಪಾದನೆ, ಭೂಗತ ಪಾತಕ ಕೃತ್ಯ, ಅಕ್ರಮ ಹಣ ವರ್ಗಾವಣೆ, ಭಯೋತ್ಪಾದಕ ನಿಧಿಯನ್ನು ಸಂಗ್ರಹಿಸಲು ಪ್ರಮುಖ ಆಸ್ತಿಗಳ ಅನಧಿಕೃತ ಸ್ವಾಧೀನ ಮತ್ತು ಲಷ್ಕರ್ ಸೇರಿದಂತೆ ಅಂತಾರಾಷ್ಟ್ರೀಯ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಕ್ರಿಯ ಸಹಯೋಗದಲ್ಲಿ ಕಾರ್ಯನಿರ್ವಹಿಸುವಂತಹ ವಿವಿಧ ಭಯೋತ್ಪಾದನೆ-ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಎನ್‌ಐಎ ಹೇಳಿದೆ.

Click it and Unblock the Notifications