ಬಾಬ್ರಿ ಮಸೀದಿ ಧ್ವಂಸಕ್ಕೆ 25 ವರ್ಷ: ದೇಶಾದ್ಯಂತ ಕಟ್ಟೆಚ್ಚರ
ನವದೆಹಲಿ, ಡಿಸೆಂಬರ್ 6: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ಬಾಬ್ರಿ ಮಸೀದಿ ಧ್ವಂಸಕ್ಕೆ ಇಂದಿಗೆ (ಬುಧವಾರ) 25ನೇ ವರ್ಷ. ಈ ಹಿನ್ನೆಲೆಯಲ್ಲಿ ದೇಶದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಬಾಬ್ರಿ ಮಸೀದಿ ಧ್ವಂಸಗೊಳಿಸಿ ಡಿಸೆಂಬರ್ 06ಕ್ಕೆ 25 ವರ್ಷ ಪೂರ್ಣವಾಗುತ್ತಿರುವ ಕಾರಣ ಈ ದಿನವನ್ನು 'ಶೌರ್ಯ ದಿನ'ವನ್ನಾಗಿ ಆಚರಿಸುವಂತೆ ವಿಶ್ವ ಹಿಂದೂ ಪರಿಷತ್ ಹಾಗೂ ಅದರ ಸೋದರ ಸಂಸ್ಥೆಯಾದ ಭಜರಂಗದಳ ಕರೆ ನೀಡಿವೆ.

ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಹಿಂದೂ-ಮುಸ್ಲಿಂ ಸಂಘ-ಸಂಸ್ಥೆಗಳಿಂದ ಸಂಭ್ರಮಾಚರಣೆ ಹಾಗೂ ಪ್ರತಿಭಟನೆಗಳು ನಡೆಯುವ ಸಾಧ್ಯತೆಗಳಿವೆ. ಇದರಿಂದ ಮುನ್ನೆಚರಿಕೆ ಕ್ರಮಗೈಗೊಳ್ಳುವಂತೆ ಕೇಂದ್ರ ಗುಪ್ತಚರ ಇಲಾಖೆಯು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶದ ಸರಕಾರಗಳಿಗೆ ಸೂಚಿಸಿದೆ.
ದೇಶಾದ್ಯಂತ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಸೂಕ್ಷ್ಮ ಪ್ರದೇಶಗಳಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸುವಂತೆ ಕೇಂದ್ರ ಗೃಹ ಸಚಿವಾಲಯವು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ಕೊಟ್ಟಿದೆ. ಅಯೋಧ್ಯೆಯಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.












Click it and Unblock the Notifications