25404 ಮಂದಿಗೆ ಸೋಂಕು: ಭಾರತದಲ್ಲಿ ಕೊರೊನಾವೈರಸ್ ಪ್ರಕರಣಗಳ ನಿರಂತರ ಏರಿಕೆ!?
ನವದೆಹಲಿ, ಸಪ್ಟೆಂಬರ್ 14: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ನಿರಂತರವಾಗಿ ಏರಿಕೆಯಾಗುತ್ತಿದೆ. ದೇಶದಲ್ಲಿ ಪ್ರತಿನಿತ್ಯ ಹೊಸ ಪ್ರಕರಣಗಳ ಸಂಖ್ಯೆ 25,000 ಗಡಿ ದಾಟುತ್ತಿದೆ. ಕಳೆದ 24 ಗಂಟೆಗಳಲ್ಲಿ 25,404 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
ಒಂದು ದಿನದಲ್ಲಿ 37,127 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಇದೇ ಅವಧಿಯಲ್ಲಿ 339 ಜನರು ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಮಂಗಳವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 3,32,89,579ಕ್ಕೆ ಏರಿಕೆಯಾಗಿದೆ. ಇದುವರೆಗೂ 3,24,84,159 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಗೆ ಬಲಿಯಾದವರ ಸಂಖ್ಯೆ 4,43,213ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ದೇಶದಲ್ಲಿ 3,62,207 ಸಕ್ರಿಯ ಪ್ರಕರಣಗಳು ವರದಿಯಾಗಿವೆ.

ಕೊರೊನಾವೈರಸ್ ಸೋಂಕಿನ ಪರೀಕ್ಷೆ ಸಂಖ್ಯೆ ಎಷ್ಟು?
ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾದರೂ ಸೋಂಕಿತರ ಸಂಖ್ಯೆ ಸ್ಥಿರವಾಗಿದೆ. ಕಳೆದ 24 ಗಂಟೆಗಳಲ್ಲಿ 14,30,891 ಜನರಿಗೆ ಪರೀಕ್ಷೆ ನಡೆಸಲಾಗಿದೆ. ದೇಶದಲ್ಲಿ ಈವರೆಗೂ 54,44,44,967 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಪ್ರಮಾಣ
ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಸಮರೋಪಾದಿಯಲ್ಲಿ ನಡೆಯುತ್ತಿದೆ. ಕಳೆದ 24 ಗಂಟೆಗಳಲ್ಲಿ 78,66,950 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 241 ದಿನಗಳಾಗಿದ್ದು, ಈವರೆಗೂ 75,22,38,324 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ. ಕೇಂದ್ರ ಸರ್ಕಾರದಿಂದ ದೇಶದ ವಿವಿಧ ರಾಜ್ಯ ಮತ್ತು ಕೇಂದ್ರಾಡಲಿತ ಪ್ರದೇಶಗಳಿಗೆ ಈವರೆಗೂ 72,77,98,325 ಡೋಸ್ ಲಸಿಕೆ ಪೂರೈಕೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿವಿಧ ಹಂತಗಳಲ್ಲಿ ಲಸಿಕೆ ವಿತರಣೆ ಎಷ್ಟಾಗಿದೆ?
ಕೊರೊನಾವೈರಸ್ ಎರಡನೇ ಅಲೆಯಲ್ಲಿ ಅತಿಹೆಚ್ಚು ಸೋಂಕು ತಗುಲಿರುವುದು ಹಾಗೂ ಸಾವಿನ ಸಂಖ್ಯೆಯಲ್ಲಿ ಅತಿಹೆಚ್ಚು ಮಧ್ಯವಯಸ್ಕರ ಸಂಖ್ಯೆಯೇ ಹೆಚ್ಚಾಗಿದೆ. 1,03,64,684 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 86,11,479 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,83,38,713 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 1,41,01,351 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.
18 ವರ್ಷ ಮೇಲ್ಪಟ್ಟ 30,26,12,416 ಮಂದಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 4,52,87,346 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ವಿತರಿಸಲಾಗಿದೆ. 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ವಿತರಣೆಯಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ದೇಶದಲ್ಲಿ ಈವರೆಗೂ 45 ವರ್ಷ ಮೇಲ್ಪಟ್ಟ 14,45,93,468 ಜನರಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 6,37,26,534 ಮಂದಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ. ದೇಶದಲ್ಲಿ ಈವರೆಗೂ 56,95,77,696 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 18,14,63,695 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಕೊರೊನಾವೈರಸ್ ಲಸಿಕೆ ಪೂರೈಕೆ ಎಷ್ಟಿದೆ?
2021ರ ಸೆಪ್ಟೆಂಬರ್ 14ರ ಅಂಕಿ-ಅಂಶಗಳ ಪ್ರಕಾರ, 72,77,98,325 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದಿಂದ ಕಳುಹಿಸಲಾಗಿರುವ ಲಸಿಕೆಯ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.
* ಪೂರೈಕೆಯಾದ ಲಸಿಕೆ ಪ್ರಮಾಣ - 72,77,98,325
* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 1,60,75,000
* ಕೊವಿಡ್-19 ಲಸಿಕೆಯ ಲಭ್ಯತೆ - 4,49,03,025












Click it and Unblock the Notifications