ದೇಶದ ಕೊರೊನಾ ಪ್ರಕರಣಗಳಲ್ಲಿ ಇಳಿಕೆ; ಮೇ 22ರಂದು ದಾಖಲಾದ ಪ್ರಕರಣಗಳೆಷ್ಟು?

ನವದೆಹಲಿ, ಮೇ 22: ಭಾರತದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಕ್ರಮೇಣ ಇಳಿಕೆಯಾಗುತ್ತಿದ್ದು, ಶನಿವಾರ 2,57,299 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ.

ಕೆಲವು ದಿನಗಳಿಂದೀಚೆ ಹೊಸ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡುಬರುತ್ತಿದೆ. ಕಳೆದ 24 ಗಂಟೆಗಳಲ್ಲಿ 2,57,299 ಮಂದಿಯಲ್ಲಿ ಸೋಂಕು ದೃಢಪಟ್ಟಿರುವುದಾಗಿ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಒಂದೇ ದಿನ 3,57,630 ಸೋಂಕಿತರು ಗುಣಮುಖರಾಗಿದ್ದು, ಚೇತರಿಸಿಕೊಳ್ಳುತ್ತಿರುವವರ ಸಂಖ್ಯೆ ಏರಿಕೆಯಾಗಿರುವುದು ಸಮಾಧಾನಕರ ಸಂಗತಿಯಾಗಿದೆ. ಮುಂದೆ ಓದಿ...

ಸೋಂಕಿನಿಂದ 4,194 ಮಂದಿ ಸಾವು

ಸೋಂಕಿನಿಂದ 4,194 ಮಂದಿ ಸಾವು

ಭಾರತದಲ್ಲಿ ಶುಕ್ರವಾರ ಕೊರೊನಾ ಸೋಂಕಿಗೆ 4209 ಮಂದಿ ಸಾವನ್ನಪ್ಪಿದ್ದರು. ಒಂದೇ ದಿನದಲ್ಲಿ 2,67,334 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿತ್ತು. ಸದ್ಯಕ್ಕೆ ಸಾವಿನ ಪ್ರಮಾಣ ಏರಿಕೆ ಹಾದಿಯಲ್ಲಿಯೇ ಇದ್ದು, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 4,194 ಮಂದಿ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

ಚೇತರಿಸಿಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚಾಗಿದೆ

ಚೇತರಿಸಿಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚಾಗಿದೆ

ದೇಶದಲ್ಲಿ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 2,62,89,290ಗೆ ತಲುಪಿದೆ. ಇದರಲ್ಲಿ 2,30,70,365 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಈವರೆಗೂ ಒಟ್ಟು 2,95,525 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಸದ್ಯಕ್ಕೆ 29,23,400 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

20,66,285 ಜನರಿಗೆ ಕೊರೊನಾ ಸೋಂಕಿನ ತಪಾಸಣೆ

20,66,285 ಜನರಿಗೆ ಕೊರೊನಾ ಸೋಂಕಿನ ತಪಾಸಣೆ

ಭಾರತದಲ್ಲಿ ಕೊರೊನಾ ಸೋಂಕಿತರ ಪತ್ತೆಗೆ ಪರೀಕ್ಷೆ ಹಾಗೂ ತಪಾಸಣೆ ವೇಗವನ್ನು ಹೆಚ್ಚಿಸಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 20,66,285 ಜನರ ಪರೀಕ್ಷಾ ಮಾದರಿಯನ್ನು ತಪಾಸಣೆಗೊಳಪಡಿಸಲಾಗಿದೆ. ದೇಶದಲ್ಲಿ ಈವರೆಗೂ 32,64,84,155 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

ಈವರೆಗೂ ಲಸಿಕೆ ಪಡೆದವರೆಷ್ಟು?

ಈವರೆಗೂ ಲಸಿಕೆ ಪಡೆದವರೆಷ್ಟು?

ಭಾರತದಲ್ಲಿ ಈವರೆಗೂ 19,33,72,819 ಮಂದಿ ಕೊರೊನಾ ಲಸಿಕೆ ಪಡೆದುಕೊಂಡಿರುವುದಾಗಿ ತಿಳಿದುಬಂದಿದೆ. ದೇಶದಲ್ಲಿ ಕೊರೊನಾ ಸೋಂಕಿನ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 123 ದಿನಗಳು ಕಳೆದಿವೆ. ಮೂರನೇ ಹಂತದಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲು ಆರಂಭಿಸಲಾಗಿದೆ.
ಮಕ್ಕಳಿಗೆ ಲಸಿಕೆ ನೀಡುವ ಕುರಿತು ಪ್ರಯೋಗಕ್ಕೆ ಅನುಮತಿ ನೀಡಲಾಗಿದೆ.
ಇದರೊಂದಿಗೆ, ಶುಕ್ರವಾರದ ವರದಿಯಂತೆ ವಿಶ್ವದೆಲ್ಲೆಡೆ ಒಟ್ಟು 165,933,444ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 146,645,883ಮಂದಿ ಚೇತರಿಕೆ ಹೊಂದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+