ಕೊರೊನಾ ಕಥೆ: ಭಾರತದಲ್ಲಿ ಒಂದೇ ದಿನ 259170 ಮಂದಿಗೆ ಸೋಂಕು!

ನವದೆಹಲಿ, ಏಪ್ರಿಲ್ 19: ಭಾರತದಲ್ಲಿ ಸೋಮವಾರಕ್ಕೆ ಹೋಲಿಸಿದರೆ ಮಂಗಳವಾರ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಕೊಂಚ ಇಳಿಮುಖವಾಗಿದೆ. ಕಳೆದ 24 ಗಂಟೆಗಳಲ್ಲಿ 259170 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ದೇಶದಲ್ಲಿ ಒಂದೇ ದಿನ 1,761 ಮಂದಿ ಪ್ರಾಣ ಬಿಟ್ಟಿದ್ದು, 1,54,761 ಮಂದಿ ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಮಂಗಳವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಒಟ್ಟು 1,53,21,089 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈವರೆಗೆ 1,31,08,582 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 1,80,530 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಉಳಿದಂತೆ 20,31,977 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ.

 259170 New Coronavirus Cases Reported in India in the Last 24 Hours

ಒಂದೇ ದಿನ 15 ಲಕ್ಷ ಜನರಿಗೆ ಕೊವಿಡ್-19 ತಪಾಸಣೆ:

ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪತ್ತೆಗೆ ತಪಾಸಣೆ ವೇಗವನ್ನು ಹೆಚ್ಚಿಸಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 15,19,486 ಜನರ ಮಾದರಿಯನ್ನು ತಪಾಸಣೆಗೊಳಪಡಿಸಲಾಗಿದೆ. ದೇಶದಲ್ಲಿ ಈವರೆಗೂ 26,94,14,035 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

ದೇಶದಲ್ಲಿ 12.71 ಕೋಟಿ ಫಲಾನುಭವಿಗಳಿಗೆ ಲಸಿಕೆ:

ಭಾರತದಲ್ಲಿ ಈವರೆಗೂ 12,71,29,113 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗಿದೆ. ಈ ಪೈಕಿ 91,69,353 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 57,66,012 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,14,21,780 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 56,64,213 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 4,23,06,422 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 13,03,610 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 4,66,41,581 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 46,83,061 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+