ಚಿಂತೆ ಬಿಡಿ: ಭಾರತದಲ್ಲಿ ಕ್ರಮೇಣ ಕೊರೊನಾವೈರಸ್ ಇಳಿಮುಖ

ನವದೆಹಲಿ, ಮೇ 21: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಇಳಿಮುಖವಾಗುತ್ತಿದೆ. ಸಾಂಕ್ರಾಮಿಕ ಪಿಡುಗಿನ 2ನೇ ಅಲೆ ನಡುವೆ ಸಾವಿನ ಪ್ರಮಾಣ ಏರಿಕೆಯಾಗುತ್ತಿದೆಯೇ ವಿನಃ ಹೊಸ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ.

ಕಳೆದ 24 ಗಂಟೆಗಳಲ್ಲಿ 2,59,591 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 3,57,295 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಂದೇ ದಿನ ಕೊರೊನಾವೈರಸ್ ಮಹಾಮಾರಿಗೆ 4,209 ಮಂದಿ ಪ್ರಾಣ ಬಿಟ್ಟಿದ್ದಾರೆ.

ಭಾರತದಲ್ಲಿ ಒಟ್ಟು 2,60,31,991 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 2,27,12,735 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಯಿಂದ ಒಟ್ಟು 2,91,331 ಜನರು ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ 30,27,925 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಒಂದು ದಿನದ ಹಿಂದೆ ಹೇಗಿತ್ತು ಕೊರೊನಾ ಚಿತ್ರಣ?

ಒಂದು ದಿನದ ಹಿಂದೆ ಹೇಗಿತ್ತು ಕೊರೊನಾ ಚಿತ್ರಣ?

ಭಾರತದಲ್ಲಿ ಗುರುವಾರ ಕೊರೊನಾವೈರಸ್ ಮಹಾಮಾರಿಗೆ 4529 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 2,78,719ಕ್ಕೆ ಏರಿಕೆಯಾಗಿತ್ತು. ಒಂದೇ ದಿನದಲ್ಲಿ 2,67,334 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿತ್ತು. 3,89,851 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಒಟ್ಟು 2,54,96,330 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 2,19,86,363 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಯಿಂದ ಒಟ್ಟು 2,83,248 ಜನರು ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ 32,26,719 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ.

20 ಲಕ್ಷ ಜನರಿಗೆ ಕೊರೊನಾವೈರಸ್ ಸೋಂಕು ತಪಾಸಣೆ

20 ಲಕ್ಷ ಜನರಿಗೆ ಕೊರೊನಾವೈರಸ್ ಸೋಂಕು ತಪಾಸಣೆ

ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪತ್ತೆಗೆ ತಪಾಸಣೆ ವೇಗವನ್ನು ಹೆಚ್ಚಿಸಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 20,61,683 ಜನರ ಮಾದರಿಯನ್ನು ತಪಾಸಣೆಗೊಳಪಡಿಸಲಾಗಿದೆ. ದೇಶದಲ್ಲಿ ಈವರೆಗೂ 32,44,17,870 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

ಮೂರು ಹಂತಗಳಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ

ಮೂರು ಹಂತಗಳಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆ ವೇಗಕ್ಕೆ ಕಡಿವಾಣ ಹಾಕಲು ಮೂರು ಹಂತಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರು, ಎರಡನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಹಾಗೂ ಮೂರನೇ ಹಂತದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 122 ದಿನಗಳೇ ಕಳೆದಿದ್ದು, ಈವರೆಗೂ 18,58,09,302 ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ.

ಕೊವಿಡ್-19 ಲಸಿಕೆ ವಿತರಣೆ ಅಂಕಿ-ಸಂಖ್ಯೆ

ಕೊವಿಡ್-19 ಲಸಿಕೆ ವಿತರಣೆ ಅಂಕಿ-ಸಂಖ್ಯೆ

ಕಳೆದ ಮೇ 1ರಿಂದ ಈವರೆಗೂ 18 ವರ್ಷ ಮೇಲ್ಪಟ್ಟ 44 ವರ್ಷದೊಳಗಿನ 85,84,054 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ಭಾರತದಲ್ಲಿ ಈವರೆಗೂ 97,23,296 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 66,80,206 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,47,84,918 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 82,84,445 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 5,98,12,707 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 95,75,946 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 5,62,36,899 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 1,81,28,133 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+