ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 97 ಲಕ್ಷಕ್ಕೆ ಏರಿಕೆ
ನವದೆಹಲಿ, ಡಿಸೆಂಬರ್ 08: ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 97 ಲಕ್ಷಕ್ಕೆ ಏರಿಕೆಯಾಗಿದೆ.
ಸೋಮವಾರಕ್ಕೆ ಹೋಲಿಸಿದರೆ ಮಂಗಳವಾರ ಭಾರತದಲ್ಲಿ ಹೊಸ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗಿದೆ. ಇಂದು 26,567 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

ಒಟ್ಟು 97,03,770 ಪ್ರಕರಣಗಳಿವೆ. ಒಂದೇ ದಿನದಲ್ಲಿ 385 ಮಂದಿ ಮೃತಪಟ್ಟಿದ್ದಾರೆ. ಇದುವರೆಗೆ 1,40,958 ಮಂದಿ ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಯಲ್ಲಿ 39,045 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೆ 91,78,946 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.












Click it and Unblock the Notifications