ಭಾರತದಲ್ಲಿ ಕೊವಿಡ್-19 ಪ್ರಕರಣಗಳ ಇಳಿಕೆ ಹಿಂದಿನ ಅಸಲಿ ಕಾರಣ ಬಹಿರಂಗ!?

ನವದೆಹಲಿ, ಸಪ್ಟೆಂಬರ್ 27: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಮತ್ತೊಮ್ಮೆ 30,000ಕ್ಕಿಂತ ಕಡಿಮೆಯಾಗಿದೆ. ಕಳೆದ 24 ಗಂಟೆಗಳಲ್ಲಿ 26041 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಆದರೆ ಈ ಸೋಂಕಿತ ಪ್ರಕರಣಗಳ ಇಳಿಕೆಯ ಹಿಂದೆ ಕೊವಿಡ್-19 ಸೋಂಕು ಪರೀಕ್ಷೆ ಪ್ರಮಾಣ ಬಹುಮುಖ್ಯ ಕಾರಣ ಎನಿಸಿದೆ.

ದೇಶದಲ್ಲಿ ಒಂದೇ ದಿನ 29,621 ಮಂದಿ ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇದೇ ಅವಧಿಯಲ್ಲಿ 276 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಸೋಮವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಕೊರೊನಾವೈರಸ್ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 3,36,78,786ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ದೇಶದಲ್ಲಿ 3,29,31,972 ಮಂದಿ ಸೋಂಕಿತರು ಗುಣಮುಖರಾಗಿದ್ದು, 4,47,194 ಮಂದಿ ಕೊರೊನಾವೈರಸ್ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದಾರೆ. 2,99,620 ಸಕ್ರಿಯ ಪ್ರಕರಣಗಳಿವೆ ಎಂದು ಗೊತ್ತಾಗಿದೆ.

26041 New Coronavirus Cases Reported in India in the Last 24 Hours

ಕೊವಿಡ್-19 ಸೋಂಕಿನ ಪರೀಕ್ಷೆ:

ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 30,000 ದಿಂದ ದಿಢೀರನೇ 26,000 ವ್ಯಾಪ್ತಿಗೆ ಇಳಿಮುಖವಾಗಿದೆ. ಹಾಗಿದ್ದಲ್ಲಿ ಕೊವಿಡ್-19 ಸೋಂಕಿನ ಭೀತಿ ಕಡಿಮೆಯಾಗಿದೆ ಎಂದು ಸಾರ್ವಜನಿಕರು ನಿಶ್ಚಿಂತೆಯಿಂದ ಇರುವಂತಿಲ್ಲ. ಏಕೆಂದರೆ ಕಳೆದ 24 ಗಂಟೆಗಳಲ್ಲಿ ಹೊಸ ಪ್ರಕರಣಗಳ ಇಳಿಕೆಗೆ ಕಾರಣವೇ ಬೇರೆಯಾಗಿದೆ. ಭಾರತದಲ್ಲಿ ಕೊರೊನೊವಾರೈಸ್ ಸೋಂಕಿನ ಪರೀಕ್ಷೆಯು 15 ರಿಂದ 11 ಲಕ್ಷಕ್ಕೆ ಇಳಿಕೆಯಾಗಿದೆ. ಕಳೆದೊಂದು ದಿನದಲ್ಲಿ 11,65,006 ಜನರಿಗೆ ಕೊವಿಡ್-19 ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ದೇಶದಲ್ಲಿ ಈವರೆಗೂ 56,44,08,251 ಜನರಿಗೆ ಕೊರೊನಾವೈರಸ್ ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

86 ಕೋಟಿ ಮಂದಿಗೆ ಕೊರೊನಾವೈರಸ್ ಲಸಿಕೆ ವಿತರಣೆ

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಭೀತಿಯಲ್ಲಿ ಲಸಿಕೆ ವಿತರಣೆ ಅಭಿಯಾನವನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ದೇಶದಲ್ಲಿ 86 ಕೋಟಿಗೂ ಅಧಿಕ ಮಂದಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 253 ದಿನಗಳಾಗಿದೆ. ಕಳೆದ 24 ಗಂಟೆಗಳಲ್ಲಿ 38,18,362 ಮಂದಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗಿದ್ದು, ಈವರೆಗೂ 86,01,59,011 ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ. ಕೇಂದ್ರ ಸರ್ಕಾರದಿಂದ ದೇಶದ ವಿವಿಧ ರಾಜ್ಯ ಮತ್ತು ಕೇಂದ್ರಾಡಲಿತ ಪ್ರದೇಶಗಳಿಗೆ ಈವರೆಗೂ 83,54,12,250 ಡೋಸ್ ಲಸಿಕೆ ಪೂರೈಕೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಯಾವ ಹಂತದಲ್ಲಿ ಯಾರಿಗೆಷ್ಟು ಲಸಿಕೆ ವಿತರಣೆ?:

ಕೊರೊನಾವೈರಸ್ ಎರಡನೇ ಅಲೆಯಲ್ಲಿ ಅತಿಹೆಚ್ಚು ಸೋಂಕು ತಗುಲಿರುವುದು ಹಾಗೂ ಸಾವಿನ ಸಂಖ್ಯೆಯಲ್ಲಿ ಅತಿಹೆಚ್ಚು ಮಧ್ಯವಯಸ್ಕರ ಸಂಖ್ಯೆಯೇ ಹೆಚ್ಚಾಗಿದೆ. 1,03,70,538 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 87,99,476 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,83,47,928 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 1,47,16,085 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

18 ವರ್ಷ ಮೇಲ್ಪಟ್ಟ 34,05,90,440 ಮಂದಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 6,88,05,465 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ವಿತರಿಸಲಾಗಿದೆ. 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ವಿತರಣೆಯಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ದೇಶದಲ್ಲಿ ಈವರೆಗೂ 45 ವರ್ಷ ಮೇಲ್ಪಟ್ಟ 15,44,27,846 ಜನರಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 7,21,67,362 ಮಂದಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೊವಿಡ್-19 ಲಸಿಕೆ ಪೂರೈಕೆ ಆಗಿದ್ದೆಷ್ಟು, ಬಳಸಿದ್ದೆಷ್ಟು?:

2021ರ ಸಪ್ಟೆಂಬರ್ 26ರ ಅಂಕಿ-ಅಂಶಗಳ ಪ್ರಕಾರ, 83,54,12,250 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಈ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.

* ಪೂರೈಕೆಯಾದ ಲಸಿಕೆ ಪ್ರಮಾಣ - 83,54,12,250

* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 1,17,12,275

* ಕೊವಿಡ್-19 ಲಸಿಕೆಯ ಲಭ್ಯತೆ - 4,56,96,920

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+