ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

24 ಗಂಟೆಗಳಲ್ಲೇ ಭಾರತದಲ್ಲಿ ಭಯ ಹುಟ್ಟಿಸಿದ ಕೊರೊನಾವೈರಸ್

|
Google Oneindia Kannada News

ನವದೆಹಲಿ, ಮಾರ್ಚ್ 15: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಕ್ರಮೇಣ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 26291 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ದೇಶದಲ್ಲಿ ಒಂದೇ ದಿನ ಕೊರೊನಾವೈರಸ್ ಮಹಾಮಾರಿಗೆ 118 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 1,58,725ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೊರೊನಾ ಲಸಿಕೆ ವಿತರಣೆಯಲ್ಲಿ ಭಾರತಕ್ಕೆ 3ನೇ ಸ್ಥಾನ!ಕೊರೊನಾ ಲಸಿಕೆ ವಿತರಣೆಯಲ್ಲಿ ಭಾರತಕ್ಕೆ 3ನೇ ಸ್ಥಾನ!

ಸೋಮವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಒಟ್ಟು 1,13,85,339 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. 24 ಗಂಟೆಗಳಲ್ಲಿ 17,455 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರ ಸಂಖ್ಯೆ 1,10,07,352ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 2,19,262 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದು ಬಂದಿದೆ.

26291 New Coronavirus Cases Reported in India in the Last 24 Hours

ಕೊರೊನಾವೈರಸ್ ಸೋಂಕಿಗೆ ಲಸಿಕೆ:

ದೇಶದಲ್ಲಿ ಈವರೆಗೂ 2,99,08,038 ಮಂದಿ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗಿದೆ. ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ.

ಜಗತ್ತಿನಲ್ಲಿ ಕೊರೊನಾವೈರಸ್ ಅಂಕಿ-ಸಂಖ್ಯೆ:

ವಿಶ್ವದಲ್ಲಿ ಒಂದೇ ದಿನ ಒಟ್ಟು 3,59,522 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಜಗತ್ತಿನಾದ್ಯಂತ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 12,04,02,299ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ ಮಹಾಮಾರಿಗೆ 5606 ಜನರು ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 26,64,781ಕ್ಕೆ ಏರಿಕೆಯಾಗಿದೆ. ಇದುವರೆಗೂ ವಿಶ್ವದ ಹಲವು ರಾಷ್ಟ್ರಗಳಲ್ಲಿ ಕೊವಿಡ್-19 ಸೋಂಕಿಗೆ ನೀಡಿದ ಚಿಕಿತ್ಸೆಯಿಂದಾಗಿ ಒಟ್ಟು 9,69,46,442 ಸೋಂಕಿತರು ಗುಣಮುಖರಾಗಿದ್ದಾರೆ. ಈ ಪೈಕಿ 2,07,91,076 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ.

English summary
26291 New Coronavirus Cases Reported in India in the Last 24 Hours.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X