ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಾವಿನ ಅಪಾಯ: ಭಾರತೀಯರ ಉಸಿರು ಕಸಿಯುತ್ತಿರುವ ಕೊರೊನಾವೈರಸ್!

|
Google Oneindia Kannada News

ನವದೆಹಲಿ, ಮೇ 18: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಯು ಒಂದು ಸೋಂಕು ಆಗಿರದೇ ಪ್ರಾಣ ತೆಗೆಯುವ ಮಹಾಮಾರಿ ಆಗಿ ಪರಿವರ್ತನೆ ಆಗಿದೆ. ಮೊದಲ ಅಲೆಯಲ್ಲಿ ಸೋಂಕು ಅಷ್ಟೊಂದು ಅಪಾಯಕಾರಿ ಎನಿಸಿರಲಿಲ್ಲ. ಆದರೆ ಈಗ ಭಾರತೀಯರಲ್ಲಿ ಭಯ ಹುಟ್ಟಿಸುತ್ತಿರುವ ಕೊವಿಡ್-19 ಎರಡನೇ ಅಲೆ ಮೊದಲಿನಂತಿಲ್ಲ.

ಕೊರೊನಾವೈರಸ್ ಮೊದಲ ಅಲೆ ಎಂದರೆ ಜ್ವರ, ಕೆಮ್ಮು, ನೆಗಡಿ, ತಲೆನೋವು ಹಾಗೂ ವೃದ್ಧರ ಪಾಲಿಗೆ ಅಪಾಯಕಾರಿ ರೋಗ ಎನ್ನುವ ಹಾಗಿತ್ತು. ದೇಶದಲ್ಲಿ ಇದೀಗ ಕೊವಿಡ್-19 ಎರಡನೇ ಅಲೆ ಯುವಕರು, ವಯಸ್ಕರು ಹಾಗೂ ವೃದ್ಧರು ಎನ್ನದೇ ದಾಳಿ ಇಡುತ್ತಿದ್ದು, ಪ್ರಾಣವಾಯುವನ್ನೇ ಕಿತ್ತುಕೊಳ್ಳುತ್ತಿದೆ.

ನಿಮ್ಮ ಶ್ವಾಸಕೋಶದ ಸಾಮರ್ಥ್ಯ ಪರೀಕ್ಷಿಸಲು ಸುಲಭ ಮಾರ್ಗ ಇಲ್ಲಿದೆನಿಮ್ಮ ಶ್ವಾಸಕೋಶದ ಸಾಮರ್ಥ್ಯ ಪರೀಕ್ಷಿಸಲು ಸುಲಭ ಮಾರ್ಗ ಇಲ್ಲಿದೆ

ಭಾರತದಲ್ಲಿ ಒಂದೇ ದಿನ ಕೊರೊನಾವೈರಸ್ ಮಹಾಮಾರಿಗೆ 4,329 ರೋಗಿಗಳು ಉಸಿರು ನಿಲ್ಲಿಸಿದ್ದು, ಸಾವಿನ ಸಂಖ್ಯೆ 2,78,719ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳು, ತಪಾಸಣೆ ಪ್ರಮಾಣ ಮತ್ತು ಲಸಿಕೆ ವಿತರಣೆ ಕುರಿತು ಒಂದು ವಿಶೇಷ ವರದಿ ಇಲ್ಲಿದೆ ನೋಡಿ.

24 ಗಂಟೆಗಳಲ್ಲಿ 2,63,533 ಮಂದಿಗೆ ಸೋಂಕು

24 ಗಂಟೆಗಳಲ್ಲಿ 2,63,533 ಮಂದಿಗೆ ಸೋಂಕು

ದೇಶದಲ್ಲಿ ಒಂದೇ ದಿನ 2,63,533 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 4,22,436 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಭಾರತದಲ್ಲಿ ಒಟ್ಟು 2,52,28,996 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 2,15,96,512 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಯಿಂದ ಒಟ್ಟು 2,78,719 ಜನರು ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ 33,53,765 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ.

ಒಂದೇ ದಿನ 18.69 ಲಕ್ಷ ಜನರಿಗೆ ಕೊವಿಡ್-19 ತಪಾಸಣೆ

ಒಂದೇ ದಿನ 18.69 ಲಕ್ಷ ಜನರಿಗೆ ಕೊವಿಡ್-19 ತಪಾಸಣೆ

ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪತ್ತೆಗೆ ತಪಾಸಣೆ ವೇಗವನ್ನು ಹೆಚ್ಚಿಸಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 18,69,223 ಜನರ ಮಾದರಿಯನ್ನು ತಪಾಸಣೆಗೊಳಪಡಿಸಲಾಗಿದೆ. ದೇಶದಲ್ಲಿ ಈವರೆಗೂ 31,82,92,881 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

ಮೂರು ಹಂತಗಳಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ

ಮೂರು ಹಂತಗಳಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆ ವೇಗಕ್ಕೆ ಕಡಿವಾಣ ಹಾಕಲು ಮೂರು ಹಂತಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರು, ಎರಡನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಹಾಗೂ ಮೂರನೇ ಹಂತದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 122 ದಿನಗಳೇ ಕಳೆದಿದ್ದು, ಈವರೆಗೂ 18,44,53,149 ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ.

Recommended Video

Black Fungus ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳಿ | Oneindia Kannada
ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ

ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ

ಭಾರತದಲ್ಲಿ ಈವರೆಗೂ 96,58,913 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 66,52,200 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,44,97,411 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 82,16,750 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 5,76,53,924 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 92,39,392 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 5,46,60,900 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 1,79,10,024 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

English summary
263533 New Coronavirus Cases Reported in India in the Last 24 Hours.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X