ದೇಶದಲ್ಲಿ 33,813 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆ
ನವದೆಹಲಿ, ಡಿಸೆಂಬರ್ 16: ದೇಶದಲ್ಲಿ ಕೊರೊನಾ ವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತಷ್ಟು ಇಳಿಕೆಯಾಗಿದೆ. ಆದರೆ ಸೋಮವಾರಕ್ಕೆ ಹೋಲಿಸಿದರೆ ಮಂಗಳವಾರದ ದಾಖಲಾದ ಒಟ್ಟು ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ.
ಭಾರತದಲ್ಲಿ 24 ಗಂಟೆಗಳಲ್ಲಿ 26,382 ಹೊಸ ಪ್ರಕರಣ ಪತ್ತೆಯಾಗಿವೆ ಎಂದು ಆರೋಗ್ಯ ಸಚಿವಾಲಯ ಬುಧವಾರ ತನ್ನ ವರದಿಯಲ್ಲಿ ತಿಳಿಸಿದೆ. 24 ಗಂಟೆಗಳಲ್ಲಿ 387 ಮಂದಿ ಕೊರೊನಾ ವೈರಸ್‌ನಿಂದ ಮೃತಪಟ್ಟಿದ್ದಾರೆ. ಇದರಿಂದ ಒಟ್ಟು ಸಾವಿನ ಪ್ರಕರಣ 1,44,096ಕ್ಕೆ ಏರಿದೆ. ಸೋಮವಾರ 22,065 ಪ್ರಕರಣಗಳು ದಾಖಲಾಗಿದ್ದವು.
ದೇಶದಲ್ಲಿ ದಾಖಲಾದ ಒಟ್ಟು ಪ್ರಕರಣಗಳ ಸಂಖ್ಯೆ ಒಂದು ಕೋಟಿಯ ಗಡಿ ಮುಟ್ಟುವತ್ತ ಸಾಗುತ್ತಿದೆ. ಇದುವರೆಗೂ 99,32,548 ಒಟ್ಟು ಪ್ರಕರಣಗಳು ದಾಖಲಾಗಿವೆ. ಇಂದು 33,813 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರಿಂದ ಬಿಡುಗಡೆಯಾದವರ ಸಂಖ್ಯೆ 94,56,449ಕ್ಕೆ ತಲುಪಿದೆ. ಈ ಮೂಲಕ ಸಕ್ರಿಯ ಪ್ರಕರಣಗಳು 3,32,002ಕ್ಕೆ ಇಳಿಕೆಯಾಗಿದೆ.

ದೇಶದಲ್ಲಿನ ಒಟ್ಟು ಕೊರೊನಾ ವೈರಸ್ ಪ್ರಕರಣಗಳಿಗೆ ಐದು ರಾಜ್ಯಗಳು ಹೊಣೆಗಾರರಾಗಿವೆ. ಒಟ್ಟು ಸಕ್ರಿಯ ಪ್ರಕರಣಗಳ ಪಟ್ಟಿಯಲ್ಲಿದ್ದ ಕರ್ನಾಟಕ ಅದರಿಂದ ಹೊರಬಂದಿದೆ. ಇನ್ನು ಮಹಾರಾಷ್ಟ್ರ, ಕೇರಳ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ ಮತ್ತು ಛತ್ತೀಸಗಡ ರಾಜ್ಯಗಳು ದೇಶದ ಶೇ 56ರಷ್ಟು ಸಕ್ರಿಯ ಪ್ರಕರಣಗಳನ್ನು ಹೊಂದಿವೆ.












Click it and Unblock the Notifications