ಭಾರತದಲ್ಲಿ ಭೀತಿ: ಒಂದೇ ದಿನ 4529 ಕೊರೊನಾ ರೋಗಿಗಳು ಸಾವು!

ನವದೆಹಲಿ, ಮೇ 19: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಯು ಮೊದಲಿಗಿಂತ ಅಪಾಯಕಾರಿಯಾಗಿದೆ. ದೇಶದಲ್ಲಿ ಪ್ರತಿನಿತ್ಯ ದಾಖಲಾಗುತ್ತಿರುವ ಕೊವಿಡ್-19 ಸೋಂಕಿತರ ಸಾವಿನ ಸಂಖ್ಯೆಯೇ ಇದಕ್ಕೆ ಸಾಕ್ಷಿ ಎನ್ನುವಂತಿದೆ.

ಕೊರೊನಾವೈರಸ್ ಸೋಂಕು ನೇರವಾಗಿ ಶ್ವಾಸಕೋಶದ ಮೇಲೆ ದಾಳಿ ಇಡುತ್ತಿದ್ದು ಸಾವಿರಾರು ಜನರ ಉಸಿರು ಕಸಿಯುತ್ತಿದೆ. ಭಾರತದಲ್ಲಿ ಒಂದೇ ದಿನ ಕೊರೊನಾವೈರಸ್ ಮಹಾಮಾರಿಗೆ 4529 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 2,78,719ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳು, ತಪಾಸಣೆ ಪ್ರಮಾಣ ಮತ್ತು ಲಸಿಕೆ ವಿತರಣೆ ಕುರಿತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿರುವ ಮಾಹಿತಿ ಕುರಿತು ಒಂದು ವಿಶೇಷ ವರದಿ ಇಲ್ಲಿದೆ ನೋಡಿ.

ಹೊಸ ಪ್ರಕರಣಕ್ಕಿಂತ ಗುಣುಖರ ಸಂಖ್ಯೆಯಲ್ಲಿ ಹೆಚ್ಚಳ

ಹೊಸ ಪ್ರಕರಣಕ್ಕಿಂತ ಗುಣುಖರ ಸಂಖ್ಯೆಯಲ್ಲಿ ಹೆಚ್ಚಳ

ದೇಶದಲ್ಲಿ ಒಂದೇ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿಗಿಂತ ಗುಣಮುಖರ ಸಂಖ್ಯೆ ಹೆಚ್ಚಾಗಿದೆ. ಕಳೆದ 24 ಗಂಟೆಗಳಲ್ಲಿ 2,67,334 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 3,89,851 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಭಾರತದಲ್ಲಿ ಒಟ್ಟು 2,54,96,330 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 2,19,86,363 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಯಿಂದ ಒಟ್ಟು 2,83,248 ಜನರು ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ 32,26,719 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ.

ಒಂದೇ ದಿನ 20 ಲಕ್ಷ ಜನರಿಗೆ ಕೊವಿಡ್-19 ತಪಾಸಣೆ

ಒಂದೇ ದಿನ 20 ಲಕ್ಷ ಜನರಿಗೆ ಕೊವಿಡ್-19 ತಪಾಸಣೆ

ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪತ್ತೆಗೆ ತಪಾಸಣೆ ವೇಗವನ್ನು ಹೆಚ್ಚಿಸಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 20,08,296 ಜನರ ಮಾದರಿಯನ್ನು ತಪಾಸಣೆಗೊಳಪಡಿಸಲಾಗಿದೆ. ದೇಶದಲ್ಲಿ ಈವರೆಗೂ 32,03,01,177 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

ಮೂರು ಹಂತಗಳಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ

ಮೂರು ಹಂತಗಳಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆ ವೇಗಕ್ಕೆ ಕಡಿವಾಣ ಹಾಕಲು ಮೂರು ಹಂತಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರು, ಎರಡನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಹಾಗೂ ಮೂರನೇ ಹಂತದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 122 ದಿನಗಳೇ ಕಳೆದಿದ್ದು, ಈವರೆಗೂ 18,58,09,302 ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ.

ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ

ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ

ಕಳೆದ ಮೇ 1ರಿಂದ ಈವರೆಗೂ 18 ವರ್ಷ ಮೇಲ್ಪಟ್ಟ 44 ವರ್ಷದೊಳಗಿನ 64,60,624 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ಭಾರತದಲ್ಲಿ ಈವರೆಗೂ 96,73,302 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 66,58,820 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,45,65,255 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 82,29,693 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 5,80,37,874 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 93,49,575 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 5,48,13,626 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 1,79,77,749 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+