ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಹಿಸುದ್ದಿ: ಭಾರತದಲ್ಲಿ 186 ದಿನಗಳ ಬಳಿಕ ದಾಖಲೆ ಬರೆದ ಕೊರೊನಾವೈರಸ್!

|
Google Oneindia Kannada News

ನವದೆಹಲಿ, ಸಪ್ಟೆಂಬರ್ 22: ಭಾರತದಲ್ಲಿ ಇತ್ತೀಚಿಗೆ ಪ್ರತಿನಿತ್ಯ ಹೊಸ ಕೊವಿಡ್-19 ಸೋಂಕಿತ ಪ್ರಕರಣಗಳಿಗಿಂತ ಗುಣಮುಖರ ಸಂಖ್ಯೆಯೇ ಹೆಚ್ಚಾಗುತ್ತಿದೆ. ಕೊರೊನಾವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆಯು 186 ದಿನಗಳ ಬಳಿಕ ದಾಖಲೆಯ ಇಳಿಕೆಯಾಗಿದೆ.

ಕಳೆದ ಒಂದು ದಿನದಲ್ಲಿ 26,964 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 34,167 ಮಂದಿ ಕೊವಿಡ್-19 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಗಳಲ್ಲಿ ಅದೇ ಮಹಾಮಾರಿಯಿಂದ 383 ಜನರು ಸಾವಿನ ಮನೆ ಸೇರಿದ್ದಾರೆ.

ಭಾರತದಲ್ಲಿ ಶೇ.100ರಷ್ಟು ಪ್ರಜೆಗಳಿಗೆ ಲಸಿಕೆ ವಿತರಿಸಿದ ರಾಜ್ಯಗಳು!?ಭಾರತದಲ್ಲಿ ಶೇ.100ರಷ್ಟು ಪ್ರಜೆಗಳಿಗೆ ಲಸಿಕೆ ವಿತರಿಸಿದ ರಾಜ್ಯಗಳು!?

ಬುಧವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಕೊರೊನಾವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆ 3,01,989 ಆಗಿದ್ದು, ಇದು ಕಳೆದ 186 ದಿನಗಳಲ್ಲೇ ಅತ್ಯಂತ ಕನಿಷ್ಠ ಎಂದು ಗೊತ್ತಾಗಿದೆ. ಇದರ ಹೊರತಾಗಿ ದೇಶದಲ್ಲಿ 3,27,83,741 ಮಂದಿ ಸೋಂಕಿತರು ಗುಣಮುಖರಾಗಿದ್ದು, 4,45,768 ಜನರು ಮಹಾಮಾರಿಯಿಂದಲೇ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೊರೊನಾವೈರಸ್ ಪರೀಕ್ಷೆ ಪ್ರಮಾಣ?

ಕೊರೊನಾವೈರಸ್ ಪರೀಕ್ಷೆ ಪ್ರಮಾಣ?

ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ನಿರಂತರವಾಗಿ ಇಳಿಮುಖವಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 15,92,395 ಜನರಿಗೆ ಕೊವಿಡ್-19 ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ದೇಶದಲ್ಲಿ ಈವರೆಗೂ 55,67,54,282 ಜನರಿಗೆ ಕೊರೊನಾವೈರಸ್ ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

82.65 ಕೋಟಿ ಮಂದಿಗೆ ಕೊರೊನಾವೈರಸ್ ಲಸಿಕೆ ವಿತರಣೆ

82.65 ಕೋಟಿ ಮಂದಿಗೆ ಕೊರೊನಾವೈರಸ್ ಲಸಿಕೆ ವಿತರಣೆ

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಭೀತಿಯಲ್ಲಿ ಲಸಿಕೆ ವಿತರಣೆ ಅಭಿಯಾನವನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ದೇಶದಲ್ಲಿ 82.65 ಕೋಟಿಗೂ ಅಧಿಕ ಮಂದಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 249 ದಿನಗಳಾಗಿದೆ. ದೇಶದಲ್ಲಿ ಈವರೆಗೂ 82,65,15,754 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ. ಕೇಂದ್ರ ಸರ್ಕಾರದಿಂದ ದೇಶದ ವಿವಿಧ ರಾಜ್ಯ ಮತ್ತು ಕೇಂದ್ರಾಡಲಿತ ಪ್ರದೇಶಗಳಿಗೆ ಈವರೆಗೂ 80,13,26,335 ಡೋಸ್ ಲಸಿಕೆ ಪೂರೈಕೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಹಂತವಾರು ಲಸಿಕೆ ವಿತರಣೆ ಪ್ರಮಾಣ ಎಷ್ಟಿದೆ?

ಹಂತವಾರು ಲಸಿಕೆ ವಿತರಣೆ ಪ್ರಮಾಣ ಎಷ್ಟಿದೆ?

ಕೊರೊನಾವೈರಸ್ ಎರಡನೇ ಅಲೆಯಲ್ಲಿ ಅತಿಹೆಚ್ಚು ಸೋಂಕು ತಗುಲಿರುವುದು ಹಾಗೂ ಸಾವಿನ ಸಂಖ್ಯೆಯಲ್ಲಿ ಅತಿಹೆಚ್ಚು ಮಧ್ಯವಯಸ್ಕರ ಸಂಖ್ಯೆಯೇ ಹೆಚ್ಚಾಗಿದೆ. 1,03,69,776 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 87,65,283 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,83,46,593 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 1,46,12,935 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

18 ವರ್ಷ ಮೇಲ್ಪಟ್ಟ 33,43,93,211 ಮಂದಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 6,46,03,335 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ವಿತರಿಸಲಾಗಿದೆ. 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ವಿತರಣೆಯಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ದೇಶದಲ್ಲಿ ಈವರೆಗೂ 45 ವರ್ಷ ಮೇಲ್ಪಟ್ಟ 15,28,73,231 ಜನರಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 7,07,25,092 ಮಂದಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ. ದೇಶದಲ್ಲಿ ಈವರೆಗೂ 61,38,70,343 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 21,19,09,785 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೇಂದ್ರ ಸರ್ಕಾರ ಪೂರೈಸಿರುವ ಕೊರೊನಾವೈರಸ್ ಲಸಿಕೆ

ಕೇಂದ್ರ ಸರ್ಕಾರ ಪೂರೈಸಿರುವ ಕೊರೊನಾವೈರಸ್ ಲಸಿಕೆ

2021ರ ಸಪ್ಟೆಂಬರ್ 22ರ ಅಂಕಿ-ಅಂಶಗಳ ಪ್ರಕಾರ, 80,13,26,335 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಈ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.

* ಪೂರೈಕೆಯಾದ ಲಸಿಕೆ ಪ್ರಮಾಣ - 80,13,26,335

* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 48,00,000

* ಕೊವಿಡ್-19 ಲಸಿಕೆಯ ಲಭ್ಯತೆ - 4,52,07,660

English summary
26964 New Coronavirus Cases Reported in India in the Last 24 Hours: Active cases lowest in 186 days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X