ದೇಶದಲ್ಲಿ ಸಕ್ರಿಯ ಪ್ರಕರಣಗಳು 3,52,586ಕ್ಕೆ ಇಳಿಕೆ
ನವದೆಹಲಿ, ಡಿಸೆಂಬರ್ 14: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 27,071 ಸೋಂಕಿತರು ಪತ್ತೆಯಾಗಿದ್ದಾರೆ. ಇದು ಜುಲೈ 9ರ ಬಳಿಕ ದಾಖಲಾದ ಅತಿ ಕಡಿಮೆ ಸಂಖ್ಯೆಯಾಗಿದೆ. ಸೋಮವಾರ ಬೆಳಗಿನ ವೇಳೆಗೆ 336 ಹೊಸ ಸಾವಿನ ಸಂಖ್ಯೆ ದಾಖಲಾಗಿದೆ. ಇದರಿಂದ 1,43,355ಕ್ಕೆ ಮರಣ ಪ್ರಮಾಣ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ 30,695 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರಿಂದ ಒಟ್ಟು ಬಿಡುಗಡೆಯಾವರ ಸಂಖ್ಯೆ 93,88,159ಕ್ಕೆ ತಲುಪಿದೆ. ದೇಶದಲ್ಲಿ ಒಟ್ಟಾರೆ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಒಂದು ಕೋಟಿಯ ಗಡಿ ಸಮೀಪಿಸುತ್ತಿದ್ದು, ಸೋಮವಾರ 98,84,100ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳಲ್ಲಿ ಹಂತ ಹಂತವಾಗಿ ಇಳಿಕೆಯಾಗುತ್ತಿದ್ದು, ಒಟ್ಟಾರೆ ಸಕ್ರಿಯ ಪ್ರಕರಣಗಳ ಸಂಖ್ಯೆ 3,52,586ಕ್ಕೆ ಇಳಿಕೆಯಾಗಿದೆ.
ಡಿಸೆಂಬರ್ 13ರವರೆಗೆ ದೇಶದಲ್ಲಿ 15,45,66,990 ಪರೀಕ್ಷೆಗಳನ್ನು ನಡೆಸಲಾಗಿದೆ. ಭಾನುವಾರ ಒಟ್ಟು 8,55,157 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ರಾಜಧಾನಿ ದೆಹಲಿಯಲ್ಲಿ ಭಾನುವಾರದ ವೇಳೆಗೆ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 10,000ದ ಗಡಿ ದಾಟಿದೆ. ಇದರಲ್ಲಿ ಕೊನೆಯ 14 ದಿನಗಳಲ್ಲಿ 1,000 ಮಂದಿ ಮೃತಪಟ್ಟಿದ್ದಾರೆ.












Click it and Unblock the Notifications