ಕೊರೊನಾ ಆಘಾತ: ಭಾರತದಲ್ಲಿ ಒಂದೇ ದಿನ 2.73 ಲಕ್ಷ ಜನರಿಗೆ ಸೋಂಕು!

ನವದೆಹಲಿ, ಏಪ್ರಿಲ್ 19: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಜನರನ್ನು ಬೆಚ್ಚಿ ಬೀಳುವಂತೆ ಮಾಡಿದೆ. ಎರಡನೇ ಅಲೆಯ ಹರಡುವಿಕೆ ವೇಗಕ್ಕೆ ಪ್ರತಿನಿತ್ಯ ದಾಖಲಾಗುತ್ತಿರುವ ಸೋಂಕಿತ ಪ್ರಕರಣಗಳೇ ಸಾಕ್ಷಿಯಾಗುತ್ತಿವೆ.

ದೇಶದಲ್ಲಿ ಒಂದೇ ದಿನ 273810 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ 1,619 ಮಂದಿ ಪ್ರಾಣ ಬಿಟ್ಟಿದ್ದು, 1,44,178 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಸೋಮವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಒಟ್ಟು 1,50,61,919 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈವರೆಗೆ 1,29,53,821 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 1,78,769 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಉಳಿದಂತೆ 19,29,329 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ. ದೇಶದಲ್ಲಿ ಕೊರೊನಾವೈರಸ್ ಸೋಂಕಿತ ತಪಾಸಣೆ, ಲಸಿಕೆ ವಿತರಣೆ ಪ್ರಮಾಣ, ಲಸಿಕೆಗಳು ಮತ್ತು ಜಗತ್ತಿನಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಕುರಿತು ಒಂದು ವರದಿ ಇಲ್ಲಿದೆ.

ಒಂದೇ ದಿನ 13.56 ಲಕ್ಷ ಜನರಿಗೆ ಕೊವಿಡ್-19 ತಪಾಸಣೆ

ಒಂದೇ ದಿನ 13.56 ಲಕ್ಷ ಜನರಿಗೆ ಕೊವಿಡ್-19 ತಪಾಸಣೆ

ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪತ್ತೆಗೆ ತಪಾಸಣೆ ವೇಗವನ್ನು ಹೆಚ್ಚಿಸಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 13,56,133 ಜನರ ಮಾದರಿಯನ್ನು ತಪಾಸಣೆಗೊಳಪಡಿಸಲಾಗಿದೆ. ದೇಶದಲ್ಲಿ ಈವರೆಗೂ 26,78,94,549 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

ದೇಶದಲ್ಲಿ 12.38 ಕೋಟಿ ಫಲಾನುಭವಿಗಳಿಗೆ ಲಸಿಕೆ

ದೇಶದಲ್ಲಿ 12.38 ಕೋಟಿ ಫಲಾನುಭವಿಗಳಿಗೆ ಲಸಿಕೆ

ಭಾರತದಲ್ಲಿ ಈವರೆಗೂ 12,38,52,566 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗಿದೆ. ಈ ಪೈಕಿ 91,28,146 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 57,08,223 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,12,33,415 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 55,10,238 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 4,04,74,993 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 10,81,759 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 4,55,94,522 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 38,91,294 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ದೇಶದಲ್ಲಿ ಮೂರು ಮಾದರಿ ಕೊರೊನಾ ಲಸಿಕೆ ವಿತರಣೆ

ದೇಶದಲ್ಲಿ ಮೂರು ಮಾದರಿ ಕೊರೊನಾ ಲಸಿಕೆ ವಿತರಣೆ

ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಇದರ ಮಧ್ಯೆ ಮಾಸ್ಕೋ, ರಷ್ಯಾದಲ್ಲಿ ಗಮಲೇಯ ನ್ಯಾಷನಲ್ ರಿಸರ್ಚ್ ಇನ್ಸ್ ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಅಭಿವೃದ್ಧಿಪಡಿಸಿದ ಸ್ಪುಟ್ನಿಕ್-ವಿ ಲಸಿಕೆ ವಿತರಿಸುವುದಕ್ಕೂ ಅನುಮೋದನೆ ನೀಡಲಾಗಿದೆ.

ವಿಶ್ವದಾದ್ಯಂತ ಕೊವಿಡ್-19 ಸೋಂಕಿತ ಪ್ರಕರಣ

ವಿಶ್ವದಾದ್ಯಂತ ಕೊವಿಡ್-19 ಸೋಂಕಿತ ಪ್ರಕರಣ

ವಿಶ್ವದಲ್ಲಿ ಒಂದೇ ದಿನ ಒಟ್ಟು 7,09,437 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಜಗತ್ತಿನಾದ್ಯಂತ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 14,19,96,689ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ ಮಹಾಮಾರಿಗೆ 9418 ಜನರು ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 30,32,733ಕ್ಕೆ ಏರಿಕೆಯಾಗಿದೆ. ಈವರೆಗೂ ವಿಶ್ವದ ಹಲವು ರಾಷ್ಟ್ರಗಳಲ್ಲಿ ಕೊವಿಡ್-19 ಸೋಂಕಿಗೆ ನೀಡಿದ ಚಿಕಿತ್ಸೆಯಿಂದಾಗಿ ಒಟ್ಟು 12,06,86,248 ಸೋಂಕಿತರು ಗುಣಮುಖರಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+