ಕೊರೊನಾವೈರಸ್: ಹೊಸ ಪ್ರಕರಣಗಳ ಇಳಿಕೆ, ಗುಣಮುಖರ ಸಂಖ್ಯೆ ಏರಿಕೆ!

ನವದೆಹಲಿ, ಮೇ 20: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಯಿಂದ ತತ್ತರಿಸಿದ ಭಾರತದಲ್ಲಿ ಮಹಾಮಾರಿ ಕೊಂಚ ನಿಯಂತ್ರಣಕ್ಕೆ ಬಂದಿದೆ. ದೇಶದಲ್ಲಿ ಹೊಸ ಸೋಂಕಿತ ಪ್ರಕರಣಕ್ಕಿಂತ ಗುಣಮುಖರ ಸಂಖ್ಯೆ ಏರುಮುಖವಾಗಿದೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,76,070 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 3,69,077 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಂದು ದಿನದಲ್ಲಿ ಮಹಾಮಾರಿಗೆ 3,874 ಮಂದಿ ಬಲಿಯಾಗಿದ್ದಾರೆ.

ಭಾರತದಲ್ಲಿ ಒಟ್ಟು 2,57,72,400 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 2,23,55,440 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಯಿಂದ ಒಟ್ಟು 2,87,122 ಜನರು ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ 31,29,878 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ.

276070 New Coronavirus Cases Reported in India in the Last 24 Hours

ಕೊರೊನಾವೈರಸ್ ಪರೀಕ್ಷೆಯ ಅಂಕಿ-ಸಂಖ್ಯೆ:

ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪತ್ತೆಗೆ ತಪಾಸಣೆ ವೇಗವನ್ನು ಹೆಚ್ಚಿಸಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 20,55,010 ಜನರ ಮಾದರಿಯನ್ನು ತಪಾಸಣೆಗೊಳಪಡಿಸಲಾಗಿದೆ. ದೇಶದಲ್ಲಿ ಈವರೆಗೂ 32,23,56,187 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

ಮೂರು ಹಂತಗಳಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ:

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆ ವೇಗಕ್ಕೆ ಕಡಿವಾಣ ಹಾಕಲು ಮೂರು ಹಂತಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರು, ಎರಡನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಹಾಗೂ ಮೂರನೇ ಹಂತದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 124 ದಿನಗಳೇ ಕಳೆದಿದ್ದು, ಈವರೆಗೂ 18,70,09,792 ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+