Gujarat: ಕಾರ್ಖಾನೆಯಲ್ಲಿ ಗ್ಯಾಸ್ ಸೋರಿಕೆ; 28 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು!
ಗುಜರಾತ್, ಆಗಸ್ಟ್ 24: ಗುಜರಾತ್‌ನ ಭರೂಚ್ ಜಿಲ್ಲೆಯ ಜಂಬೂಸರ್ ಬಳಿಯ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಅನಿಲ ಸೋರಿಕೆಯಿಂದಾಗಿ 28 ಮಂದಿ ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಸರೋದ್ ಗ್ರಾಮದ ಬಳಿಯಿರುವ ಪಿ.ಐ. ಇಂಡಸ್ಟ್ರೀಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯಿಂದಾಗಿ ಬ್ರೋಮಿನ್ ಅನಿಲ ಸೋರಿಕೆಯಾಗಿ 28 ಜನರಿಗೆ ಉಸಿರಾಟದ ತೊಂದರೆಯಿಂದ ಬಳಲಿದ್ದು, ನಂತರ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಗುಜರಾತ್‌ನ ಭರೂಚ್ ಹೆಚ್ಚುವರಿ ಕೆಲೆಕ್ಟರ್ ಎನ್‌ಆರ್ ಧಂಧಲ್ ಹೇಳಿದ್ದಾಗಿ ಎಎನ್‌ಐ ವರದಿ ಮಾಡಿದೆ.

ವೇದಾಜ್ ಗ್ರಾಮದ ಪಿಐ ಇಂಡಸ್ಟ್ರೀಸ್ ಒಡೆತನದ ರಾಸಾಯನಿಕ ಕಾರ್ಖಾನೆಯ ಟ್ಯಾಂಕ್‌ನಿಂದ ಬ್ರೋಮಿನ್ ಅನಿಲ ಸೋರಿಕೆಯಾದ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಈ ಗ್ಯಾಸ್ ಸೋರಿಕೆಯಿಂದಾಗಿ ಉಸಿರಾಟದ ಸಮಸ್ಯೆಯಿಂದಾಗಿ ಹತ್ತೊಂಬತ್ತು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಅವರ ಸ್ಥಿತಿ ಈಗ ಸ್ಥಿರವಾಗಿದೆ. ಅಲ್ಲದೇ ಅನಿಲ ಸೋರಿಕೆಯನ್ನು ನಿಯಂತ್ರಿಸಲಾಗಿದೆ ಎಂದು ಭರೂಚ್ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಮಯೂರ್ ಚಾವ್ಡಾ ಹೇಳಿದ್ದಾರೆ. ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಹೇಳಿದ್ದಾರೆ.
ಬುಧವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಮತ್ತು ಇತರ ರಕ್ಷಣಾ ತಂಡಗಳು ಗಣನೀಯ ಸಂಖ್ಯೆಯಲ್ಲಿ ಬಂದು ಕಂಪನಿಯ ಉದ್ಯೋಗಿಗಳನ್ನು ಸ್ಥಳಾಂತರಿಸಲು ತ್ವರಿತವಾಗಿ ಅನುಕೂಲ ಮಾಡಿಕೊಟ್ಟರು. ಇನ್ನೂ ಅನಿಲ ಸೋರಿಕೆಯಿಂದಾಗಿ ಅಸ್ವಸ್ಥಗೊಂಡಿದ್ದ ಜನರನ್ನ ತಕ್ಷಣದ ಆರೈಕೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.












Click it and Unblock the Notifications