Breaking: ಭಾರತದಲ್ಲಿ ಕೋವಿಡ್-19 ಸೋಂಕಿಗೆ ಗಂಟೆಗೊಬ್ಬರು ಸಾವು!
ನವದೆಹಲಿ, ಮೇ 12: ಭಾರತದಲ್ಲಿ ಕೊರೊನಾವೈರಸ್ ಸೋಂಕಿನಿಂದ ಗಂಟೆಗೊಬ್ಬರು ಪ್ರಾಣ ಬಿಟ್ಟಿರುವುದು ವರದಿಯಾಗಿದೆ. ಕಳೆದ 24 ಗಂಟೆಗಳಲ್ಲಿ 24 ಮಂದಿ ಕೋವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ.
ಆದರೆ ಕೊರೊನಾವೈರಸ್ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ. ಬುಧವಾರ ಮಂಗಳವಾರ 2897 ಮಂದಿಗೆ ಕೋವಿಡ್-19 ಸೋಂಕು ತಗುಲಿದ್ದು, ಕಳೆದ 24 ಗಂಟೆಗಳಲ್ಲಿ ಆ ಸಂಖ್ಯೆಯು 2827ಕ್ಕೆ ತಗ್ಗಿದೆ. ಕಳೆದೊಂದು ದಿನದಲ್ಲಿ 2827 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ.
ಕಳೆದ ಒಂದು ದಿನದಲ್ಲಿ 3230 ಕೋವಿಡ್-19 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ:
ಭಾರತದಲ್ಲಿ ಇದುವರೆಗೂ 4,25,70,165 ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರ ಶೇಕಡಾವಾರು ಪ್ರಮಾಣ ಶೇ.98.74ರಷ್ಟಿದೆ. ಅದೇ ರೀತಿ ಮಹಾಮಾರಿ ಕೋವಿಡ್-19 ಸೋಂಕಿಗೆ ದೇಶದಲ್ಲಿ ಇದುವರೆಗೂ 5,24,181 ಮಂದಿ ಪ್ರಾಣ ಬಿಟ್ಟಿದ್ದು, ಮೃತರ ಪ್ರಮಾಣ ಶೇ.1.22ರಷ್ಟಿದೆ. ದೇಶದಲ್ಲಿ ಒಟ್ಟು ಕೊರೊನಾವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆ 19,067 ಆಗಿದೆ. ಸಕ್ರಿಯ ಪ್ರಕರಣಗಳ ಪ್ರಮಾಣ ಶೇ.0.04ರಷ್ಟಿದೆ.
ಕೋವಿಡ್-19 ಲಸಿಕೆ ವಿತರಣೆಗೆ ವೇಗ ನೀಡಲಾಗುತ್ತಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲೇ 14,85,292 ಮಂದಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗಿದ್ದು, ಈವರೆಗೂ 1,90,83,96,788 ಡೋಸ್ ಲಸಿಕೆಯನ್ನು ವಿತರಣೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.












Click it and Unblock the Notifications