ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಭಾರತದಲ್ಲಿ ಒಂದೇ ದಿನ 2841 ಮಂದಿಗೆ ಕೋವಿಡ್-19 ಪಾಸಿಟಿವ್!

|
Google Oneindia Kannada News

ನವದೆಹಲಿ, ಮೇ 13: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರಿದಿದೆ. ಕಳೆದ 24 ಗಂಟೆಗಳಲ್ಲಿ 2841 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪಕ್ಕಾ ಆಗಿದೆ.

ದೇಶದಲ್ಲಿ ಒಂದು ದಿನದಲ್ಲಿ ಕೊರೊನಾವೈರಸ್ ಮಹಾಮಾರಿಯಿಂದ 9 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದೇ ಅವಧಿಯಲ್ಲಿ 3295 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

'WHO ಸುಧಾರಣೆಯಾಗಬೇಕು': ಎರಡನೇ ಜಾಗತಿಕ ಕೋವಿಡ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ'WHO ಸುಧಾರಣೆಯಾಗಬೇಕು': ಎರಡನೇ ಜಾಗತಿಕ ಕೋವಿಡ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ

ಭಾರತದಲ್ಲಿ ಇದುವರೆಗೂ 4,25,73,460 ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರ ಶೇಕಡಾವಾರು ಪ್ರಮಾಣ ಶೇ.98.74ರಷ್ಟಿದೆ. ಅದೇ ರೀತಿ ಮಹಾಮಾರಿ ಕೋವಿಡ್-19 ಸೋಂಕಿಗೆ ದೇಶದಲ್ಲಿ ಇದುವರೆಗೂ 5,24,190 ಮಂದಿ ಪ್ರಾಣ ಬಿಟ್ಟಿದ್ದು, ಮೃತರ ಪ್ರಮಾಣ ಶೇ.1.22ರಷ್ಟಿದೆ. ದೇಶದಲ್ಲಿ ಒಟ್ಟು ಕೊರೊನಾವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆ 18,604 ಆಗಿದೆ. ಸಕ್ರಿಯ ಪ್ರಕರಣಗಳ ಪ್ರಮಾಣ ಶೇ.0.04ರಷ್ಟಿದೆ.

2841 Covid-19 Cases reports in India at Last 24 Hours

ಕೊರೊನಾವೈರಸ್ ಲಸಿಕೆ ವಿತರಣೆ ಪ್ರಮಾಣ:

ಕೋವಿಡ್-19 ಲಸಿಕೆ ವಿತರಣೆಗೆ ವೇಗ ನೀಡಲಾಗುತ್ತಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲೇ 14,03,803 ಮಂದಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗಿದ್ದು, ಈವರೆಗೂ 1,90,99,44,803 ಡೋಸ್ ಲಸಿಕೆಯನ್ನು ವಿತರಣೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

English summary
2841 Covid-19 Cases reports in India at Last 24 Hours. Know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X