ಭಾರತದಲ್ಲಿ ಈವರೆಗೂ 1,59,044 ಜನರ ಬಲಿ ತೆಗೆದುಕೊಂಡ ಕೊರೊನಾವೈರಸ್
ನವದೆಹಲಿ, ಮಾರ್ಚ್ 17: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಹೊಸ ದಾಖಲೆ ಬರೆದಿದೆ. ಒಂದೇ ದಿನದಲ್ಲಿ 28903 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
ಕಳೆದ 24 ಗಂಟೆಗಳಲ್ಲಿ ಕೊರೊನಾವೈರಸ್ ಮಹಾಮಾರಿಗೆ 188 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 1,59,044ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಬುಧವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಈವರೆಗೂ ಒಟ್ಟು 1,14,38,734 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ 17,741 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರ ಸಂಖ್ಯೆ 1,10,45,284ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 2,34,406 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದು ಬಂದಿದೆ.

ಕೊರೊನಾವೈರಸ್ ಸೋಂಕಿಗೆ ಲಸಿಕೆ:
ದೇಶದಲ್ಲಿ ಈವರೆಗೂ 3,50,64,536 ಮಂದಿ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗಿದೆ. ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ.












Click it and Unblock the Notifications