ಅಂಕಿ-ಸಂಖ್ಯೆ ಆಟ; ಭಾರತದಲ್ಲಿ ಕೊರೊನಾ ಭಯ ಸೃಷ್ಟಿಗೆ 'ಇದೇ' ಕಾರಣ!?

ನವದೆಹಲಿ, ಏಪ್ರಿಲ್ 21: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ದಿನದಿಂದ ದಿನಕ್ಕೆ ಅಪಾಯಕಾರಿ ಜೊತೆಗೆ ಬಹು ಮಾರಕವಾಗಿ ಮಾರ್ಪಡುತ್ತಿದೆ. ಪ್ರತಿನಿತ್ಯ ಪತ್ತೆಯಾಗುತ್ತಿರುವ ಸೋಂಕಿತ ಪ್ರಕರಣಗಳ ಸಂಖ್ಯೆಯೇ ಜನರ ಎದೆಯಲ್ಲಿ ನಡುಕ ಹುಟ್ಟುವುದಕ್ಕೆ ಪ್ರಮುಖ ಕಾರಣವಾಗುತ್ತಿದೆ.

ಮಂಗಳವಾರ 259170 ಜನರಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿದ್ದರೆ, ಇದಾಗಿ 24 ಗಂಟೆಗಳಲ್ಲೇ ಮತ್ತೊಮ್ಮೆ ಕೊರೊನಾವೈರಸ್ ಸೋಂಕು ಹೊಸ ದಾಖಲೆ ಬರೆದಿದೆ. ಒಂದೇ ಒಂದು ದಿನದಲ್ಲಿ 295041 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ಕಳೆದ 24 ಗಂಟೆಗಳಲ್ಲಿ 2,023 ಜನರು ಕೊರೊನಾವೈರಸ್ ಸೋಂಕಿಗೆ ಬಲಿಯಾಗಿದ್ದರೆ, 1,67,457 ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1,56,16,130ಕ್ಕೆ ಏರಿಕೆಯಾಗಿದೆ. ಈವರೆಗೂ 1,32,76,039 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಸಾವಿನ ಸಂಖ್ಯೆ 1,82,553ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ದೇಶದಲ್ಲಿ 21,57,538 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ 24 ಗಂಟೆಗಳಲ್ಲಿ ಆಗಿರುವ ವ್ಯತ್ಯಾಸ

ದೇಶದಲ್ಲಿ 24 ಗಂಟೆಗಳಲ್ಲಿ ಆಗಿರುವ ವ್ಯತ್ಯಾಸ

ಭಾರತದಲ್ಲಿ ಒಂದೇ ದಿನ ಕೊರೊನಾವೈರಸ್ ಸೋಂಕಿತ ಪ್ರಕರಣಗಳಲ್ಲಿ ಸಾಕಷ್ಟು ವ್ಯತ್ಯಾಸ ಕಂಡು ಬಂದಿದೆ. ಮಂಗಳವಾರದ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಅಂಕಿ-ಸಂಖ್ಯೆಗಳು ಹೀಗಿವೆ. ಕಳೆದ 24 ಗಂಟೆಗಳಲ್ಲಿ 259170 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿತ್ತು. ಒಂದೇ ದಿನ 1,761 ಮಂದಿ ಪ್ರಾಣ ಬಿಟ್ಟಿದ್ದು, 1,54,761 ಮಂದಿ ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಒಟ್ಟು 1,53,21,089 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈವರೆಗೆ 1,31,08,582 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 1,80,530 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಉಳಿದಂತೆ 20,31,977 ಕೊವಿಡ್-19 ಸಕ್ರಿಯ ಪ್ರಕರಣಗಳ ದಾಖಲಾಗಿದ್ದವು.

ಒಂದೇ ದಿನ 16 ಲಕ್ಷ ಜನರಿಗೆ ಕೊವಿಡ್-19 ತಪಾಸಣೆ

ಒಂದೇ ದಿನ 16 ಲಕ್ಷ ಜನರಿಗೆ ಕೊವಿಡ್-19 ತಪಾಸಣೆ

ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪತ್ತೆಗೆ ತಪಾಸಣೆ ವೇಗವನ್ನು ಹೆಚ್ಚಿಸಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 16,39,357 ಜನರ ಮಾದರಿಯನ್ನು ತಪಾಸಣೆಗೊಳಪಡಿಸಲಾಗಿದೆ. ದೇಶದಲ್ಲಿ ಈವರೆಗೂ 27,10,53,392 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

ದೇಶದಲ್ಲಿ 13 ಕೋಟಿ ಫಲಾನುಭವಿಗಳಿಗೆ ಲಸಿಕೆ

ದೇಶದಲ್ಲಿ 13 ಕೋಟಿ ಫಲಾನುಭವಿಗಳಿಗೆ ಲಸಿಕೆ

ದೇಶದಲ್ಲಿ ಈವರೆಗೆ 13,01,19,310 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ದೇಶದಲ್ಲಿ 92,01,040 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 58,16,538 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,15,59,218 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 58,52,669 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 4,34,85,752 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 14,90,460 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 4,73,31,326 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 52,90,367 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ದೇಶದಲ್ಲಿ ಮೂರು ಮಾದರಿ ಕೊರೊನಾ ಲಸಿಕೆ ವಿತರಣೆ

ದೇಶದಲ್ಲಿ ಮೂರು ಮಾದರಿ ಕೊರೊನಾ ಲಸಿಕೆ ವಿತರಣೆ

ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಇದರ ಮಧ್ಯೆ ಮಾಸ್ಕೋ, ರಷ್ಯಾದಲ್ಲಿ ಗಮಲೇಯ ನ್ಯಾಷನಲ್ ರಿಸರ್ಚ್ ಇನ್ಸ್ ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಅಭಿವೃದ್ಧಿಪಡಿಸಿದ ಸ್ಪುಟ್ನಿಕ್-ವಿ ಲಸಿಕೆ ವಿತರಿಸುವುದಕ್ಕೂ ಅನುಮೋದನೆ ನೀಡಲಾಗಿದೆ.

ವಿಶ್ವದಾದ್ಯಂತ ಕೊವಿಡ್-19 ಸೋಂಕಿತ ಪ್ರಕರಣ

ವಿಶ್ವದಾದ್ಯಂತ ಕೊವಿಡ್-19 ಸೋಂಕಿತ ಪ್ರಕರಣ

ವಿಶ್ವದಲ್ಲಿ ಒಂದೇ ದಿನ ಒಟ್ಟು 8,25,057 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಜಗತ್ತಿನಾದ್ಯಂತ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 14,35,36,452ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ ಮಹಾಮಾರಿಗೆ 13905 ಜನರು ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 30,56,926ಕ್ಕೆ ಏರಿಕೆಯಾಗಿದೆ. ಈವರೆಗೂ ವಿಶ್ವದ ಹಲವು ರಾಷ್ಟ್ರಗಳಲ್ಲಿ ಕೊವಿಡ್-19 ಸೋಂಕಿಗೆ ನೀಡಿದ ಚಿಕಿತ್ಸೆಯಿಂದಾಗಿ ಒಟ್ಟು 12,21,49,050 ಸೋಂಕಿತರು ಗುಣಮುಖರಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+