• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

132 ದಿನಗಳ ನಂತರ ದೇಶದಲ್ಲಿ ತಗ್ಗಿದ ಕೊರೊನಾ ಸೋಂಕು

|
Google Oneindia Kannada News

ನವದೆಹಲಿ, ಜುಲೈ 27: ದೇಶದಲ್ಲಿ 132 ದಿನಗಳ ನಂತರ ಕೊರೊನಾ ಪ್ರಕರಣಗಳ ಸಂಖ್ಯೆ ತಗ್ಗಿದ್ದು, ಸೋಂಕಿನಿಂದ ಗುಣಮುಖರಾದವರ ಸಂಖ್ಯೆಯಲ್ಲಿಯೂ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡುಬಂದಿದೆ. 124 ದಿನಗಳ ನಂತರ ಸಕ್ರಿಯ ಪ್ರಕರಣಗಳ ಸಂಖ್ಯೆ ನಾಲ್ಕು ಲಕ್ಷಕ್ಕಿಂತ ಕಡಿಮೆ ದಾಖಲಾಗಿದೆ.

ಕಳೆದ 24 ಗಂಟೆಗಳಲ್ಲಿ 29,689 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ಕೊರೊನಾ ಸೋಂಕಿತ ತಾಯಿಯಿಂದ ಭ್ರೂಣಕ್ಕೆ ತೊಂದರೆಯೇ?; ವೈದ್ಯರಿಂದ ಸ್ಪಷ್ಟನೆಕೊರೊನಾ ಸೋಂಕಿತ ತಾಯಿಯಿಂದ ಭ್ರೂಣಕ್ಕೆ ತೊಂದರೆಯೇ?; ವೈದ್ಯರಿಂದ ಸ್ಪಷ್ಟನೆ

ಒಂದು ದಿನದ ಅವಧಿಯಲ್ಲಿ 42,363 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 415 ಮಂದಿ ಸಾವನ್ನಪ್ಪಿದ್ದಾರೆ.

ಮಂಗಳವಾರದ ಅಂಕಿಸಂಖ್ಯೆ ಪ್ರಕಾರ, ಇದುವರೆಗೂ ದೇಶದಲ್ಲಿ ಒಟ್ಟು 3,06,21,469 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 3,98,100 ಆಗಿದೆ. ಇಲ್ಲಿಯವರೆಗೆ ಸೋಂಕಿನಿಂದ 4,21,382 ಮಂದಿ ಸಾವನ್ನಪ್ಪಿದ್ದಾರೆ.

ದೇಶದಲ್ಲಿ ಕೊರೊನಾ ನಿಯಂತ್ರಣಕ್ಕೆ ಜನವರಿ 16ರಿಂದ ಕೊರೊನಾ ಲಸಿಕೆ ಅಭಿಯಾನ ಆರಂಭಿಸಲಾಗಿದ್ದು, ಇದುವರೆಗೂ 44,19,12,395 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಕೊರೊನಾ ಲಸಿಕೆ ಪಡೆದ ನಂತರ ಹೊಸ ಸೋಂಕಿತ ಪ್ರಕರಣಗಳು ಹಾಗೂ ಸಾವಿನ ಸಂಖ್ಯೆಯಲ್ಲಿ ಇಳಿಮುಖವಾಗಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೊರೊನಾ ಸೋಂಕಿನ ವಾರದ ಪಾಸಿಟಿವಿಟಿ ದರ 2.33% ಇದ್ದು, ದಿನನಿತ್ಯದ ಪ್ರಕರಣಗಳ ದರ 1.73% ಆಗಿದೆ.

English summary
29689 new coronavirus cases reported in india on July 27. 42,363 people recovered
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X