ಸಿಂಗ್ ಹೆಸರು ಕೈಬಿಡಲು ಬಂದಿತ್ತಂತೆ ಒತ್ತಡ
ನವದೆಹಲಿ, ಸೆ. 12 : 2ಜಿ ತರಾಂಗತರ ಹಂಚಿಕೆ ಹಗರಣಕ್ಕೆ ಸಂಬಂಧಿಸಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೆಸರು ಕೈಬಿಡುವಂತೆ ಕಾಂಗ್ರೆಸ್ ನಾಯಕರು ಅನೇಕ ಸಾರಿ ಒತ್ತಡ ಹೇರಿದ್ದರು ಎಂದು ನಿವೃತ್ತ ಸಿಎಜಿ ವಿನೋದ್ ರೈ ಹೊಸ ಬಾಂಬ್ ಸಿಡಿಸಿದ್ದಾರೆ.
2ಜಿ ಮತ್ತು ಕಲ್ಲಿದ್ದಲು ಹಂಚಿಕೆಯಲ್ಲಿ ಹಗರಣದ ಸಂಬಂಧಿಸಿ ನಡೆಸಲಾದ ಲೆಕ್ಕ ಪರಿಶೋಧನಾ ವರದಿಯಲ್ಲಿ ಮನಮೋಹನ್ ಸಿಂಗ್ ಹೆಸರು ಸೇರಿಸದಂತೆ ಅಂದಿನ ಕಾಂಗ್ರೆಸ್ ಸಂಸದರಲ್ಲಿ ಕೆಲವರು ನನ್ನ ಮೇಲೆ ಒತ್ತಡ ತಂದಿದ್ದರು ಎಂದು ಹೇಳಿದ್ದಾರೆ.

ನಾನು ಅನೇಕ ಬಾರಿ ಪ್ರಕರಣದ ಬಗ್ಗೆ ನಡೆಸಿದ ತನಿಖಾ ವರದಿಯಲ್ಲಿ ಮನಮೋಹನ್ ಸಿಂಗ್ ಹೆಸರು ಪ್ರಸ್ತಾಪಿಸಿದ್ದೆ. ಆದರೆ, ಅದನ್ನು ಕಾಂಗ್ರೆಸ್ ನಾಯಕರು ಗಣನೆಗೆ ತೆಗೆದುಕೊಳ್ಳಲಿಲ್ಲ. 2ಜಿ ಹಗರಣ ಸಂಬಂಧಿಸಿ ನಡೆದ ಪಿಎಸಿ ಸಭೆಯಲ್ಲಿ ವಸ್ತುನಿಷ್ಠ ವರದಿ ಸಲ್ಲಿಸಿದ್ದೆ ಎಂದು ವಿವರಿಸಿದ್ದಾರೆ.
'ನನಗೆ ಒತ್ತಡ ತಂದಿದ್ದವರು ಈಗ ಜನಪ್ರತಿನಿಧಿಗಳಾಗಿ ಉಳಿದಿಲ್ಲ. ಅಧಿಕಾರದ ಮೇಲಿನ ಆಸೆಯಿಂದ ಅವರೋ ಅಥವಾ ಸ್ವತಃ ಮನಮೋಹನ್ ಸಿಂಗ್ ಅವರೋ ಈ ರೀತಿ ನಡೆದುಕೊಂಡಿದ್ದರು' ಎಂದು ಔಟ್ ಲುಕ್ ಪತ್ರಿಕೆಗೆ ನೀಡಿರುವ ಸಂದರ್ಶನದ ವೇಳೆ ಹೇಳಿದ್ದಾರೆ.(11300 ಕೋಟಿ ರೂ ಸ್ಪೆಕ್ಟ್ರಂ ಹರಾಜು: ಆದಾಯ ಯಾರಿಗೆ?)
ಉತ್ತಮ ರಾಜಕಾರಣದಿಂದ ಉತ್ತಮ ಆರ್ಥಿಕ ವ್ಯವಸ್ಥೆ ನಿರ್ಮಾಣವಾಗುತ್ತದೆ. ಉತ್ತಮ ರಾಜಕಾರಣವೆಂದರೆ ಕೇವಲ ಅಧಿಕಾರದಕಲ್ಲಿ ಇರುವುದಲ್ಲ. ನನ್ನ ಫೋನ್ ಸಹ ಯುಪಿಎ ಅಧಿಕಾರ ಅವಧಿಯಲ್ಲಿ ಟ್ಯಾಪ್ ಮಾಡಲಾಗಿತ್ತು, ಕಲ್ಲಿದ್ದಲು ಹಂಚಿಕೆ ಪ್ರಕರಣದಲ್ಲಿ ಮನಮೋಹನ್ ಸಿಂಗ್ ಪಾತ್ರವಿದೆ..ಈ ರೀತಿಯ ಹಲವಾರು ವಿಚಾರಗಳನ್ನು ತಾವು ಬರೆಯಲು ಹೊರಟಿರುವ ಹೊಸ ಪುಸ್ತಕದಲ್ಲಿ ಹೇಳಲಿದ್ದೇನೆ ಎಂದು ವಿನೋದ್ ರೈ ತಿಳಿಸಿದ್ದಾರೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications