ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ 3.29 ಕೋಟಿ ಡೋಸ್ ಲಸಿಕೆ ಇನ್ನೂ ಬಳಕೆಯಾಗಿಲ್ಲ; ಕೇಂದ್ರ

|
Google Oneindia Kannada News

ನವದೆಹಲಿ, ಜುಲೈ 25: ಭಾರತದಲ್ಲಿ ಕೊರೊನಾವೈರಸ್ ಲಸಿಕೆ ಪೂರೈಕೆ ಮತ್ತು ಸರಬರಾಜು ಕೊರತೆ ಹೆಚ್ಚಾಗಿದೆ ಎನ್ನುವ ಆರೋಪ ಕೇಳಿ ಬರುತ್ತಿರುವುದರ ಮಧ್ಯೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಈ ಬಗ್ಗ ಸ್ಪಷ್ಟನೆ ನೀಡಿದೆ.

ಕೇಂದ್ರ ಸರ್ಕಾರದಿಂದ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪೂರೈಕೆ ಆಗಿರುವ 3.29 ಕೋಟಿ ಡೋಸ್ ಲಸಿಕೆಯು ಇನ್ನೂ ಬಳಕೆಯಾಗದೇ ಉಳಿದಿದೆ. ದೇಶದಲ್ಲಿ ಈವರೆಗೂ 45.37 ಕೋಟಿ ಡೋಸ್ ಲಸಿಕೆಯನ್ನು ಪೂರೈಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದೆ.

 3 ನೇ ಕೋವಿಡ್‌ ಅಲೆ ಕಡಿಮೆ ತೀವ್ರವಾಗಿರುತ್ತದೆಯೇ, ಏಮ್ಸ್‌ ಮುಖ್ಯಸ್ಥರು ಹೇಳಿದ್ದೇನು? 3 ನೇ ಕೋವಿಡ್‌ ಅಲೆ ಕಡಿಮೆ ತೀವ್ರವಾಗಿರುತ್ತದೆಯೇ, ಏಮ್ಸ್‌ ಮುಖ್ಯಸ್ಥರು ಹೇಳಿದ್ದೇನು?

ದೇಶದಲ್ಲಿ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 190 ದಿನಗಳಲ್ಲಿ 43 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ. ಶನಿವಾರ ರಾತ್ರಿ 7 ಗಂಟೆ ವೇಳೆಗೆ 45,74,298 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಈವರೆಗೂ 43,31,50,864 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ.

India: 3.29 Crore Dose Unutilised Vaccine Still Available With States And Private Hospitals, Says Govt

ಕೇಂದ್ರ ಸರ್ಕಾರದಿಂದ ಶೇ.75ರಷ್ಟು ಲಸಿಕೆ ಖರೀದಿಸಿ ಪೂರೈಕೆ

ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಕೊರೊನಾವೈರಸ್ ಲಸಿಕೆಯ ಶೇ.75ರಷ್ಟು ಪ್ರಮಾಣವನ್ನು ಕೇಂದ್ರ ಸರ್ಕಾರವೇ ಕಂಪನಿಗಳಿಂದ ನೇರವಾಗಿ ಖರೀದಿಸುತ್ತದೆ. ಹೀಗೆ ಖರೀದಿಸಿದ ಲಸಿಕೆಯನ್ನು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಸರಬರಾಜು ಮಾಡಲಾಗುತ್ತದೆ. ದೇಶದಲ್ಲಿ ಪ್ರತಿಯೊಬ್ಬರಿಗೆ ಕೊವಿಡ್-19 ಲಸಿಕೆ ಸಿಗಬೇಕು ಎನ್ನುವ ಉದ್ದೇಶದಿಂದ ಉಚಿತ ಲಸಿಕೆ ವಿತರಣೆ ಅಭಿಯಾನವನ್ನು ನಡೆಸಲಾಗುತ್ತಿದೆ.

ಕೇಂದ್ರ ಸರ್ಕಾರದಿಂದ ಈವರೆಗೂ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಷ್ಟು ಡೋಸ್ ಲಸಿಕೆ ಪೂರೈಕೆ ಆಗಿದೆ. ಎಷ್ಟು ಡೋಸ್ ಕೊವಿಡ್-19 ಲಸಿಕೆ ಬಾಕಿ ಉಳಿದಿದೆ. ಎಷ್ಟು ಡೋಸ್ ಲಸಿಕೆ ವ್ಯರ್ಥವಾಗಿದೆ. ದೇಶದಲ್ಲಿ ಅನುಮೋದನೆ ಪಡೆದಿರುವ ಲಸಿಕೆಗಳು ಯಾವುವು ಎಂಬುದರ ಕುರಿತು ಮುಂದೆ ಓದಿ.

ಕೊರೊನಾವೈರಸ್ ಲಸಿಕೆ ಪೂರೈಕೆ ಮತ್ತು ಲಭ್ಯತೆ ಪಟ್ಟಿ

2021ರ ಜುಲೈ 23ರ ಅಂಕಿ-ಅಂಶಗಳ ಪ್ರಕಾರ, ದೇಶದಲ್ಲಿ 45,37,70,580 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಈ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.

ಕೊರೊನಾವೈರಸ್ ಲಸಿಕೆ ಪೂರೈಕೆ ಮತ್ತು ಲಭ್ಯತೆ ಪಟ್ಟಿ:

* ಪೂರೈಕೆಯಾದ ಲಸಿಕೆ ಪ್ರಮಾಣ - 45,37,70,580

* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 11,79,010

* ಬಳಕೆ ಆಗಿರುವ ಲಸಿಕೆ ಪ್ರಮಾಣ - 42,08,32,021

* ಕೊವಿಡ್-19 ಲಸಿಕೆಯ ಲಭ್ಯತೆ - 3,29,38,559

English summary
India: 3.29 Crore Dose Unutilised Vaccine Still Available With States And Private Hospitals, Says Govt.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X