ಏಪ್ರಿಲ್ 26; ಭಾರತದಲ್ಲಿ ಮೂರೂವರೆ ಲಕ್ಷ ಮೀರಿದ ಕೊರೊನಾ ಪ್ರಕರಣ
ನವದೆಹಲಿ, ಏಪ್ರಿಲ್ 26: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 3,52,991 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಒಂದೇ ದಿನ 2812 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 2,19,272 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಕಳೆದ 24 ಗಂಟೆಗಳಲ್ಲಿ ದಾಖಲಾದ ಈ ಪ್ರಕರಣಗಳೊಂದಿಗೆ ದೇಶದಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 1,73,13,163ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 28,13,658 ಆಗಿದೆ.
ದೇಶದಲ್ಲಿ ಇದುವರೆಗೂ ಕೊರೊನಾ ಸೋಂಕಿನಿಂದ 1,43,04,382 ಮಂದಿ ಗುಣಮುಖರಾಗಿದ್ದಾರೆ. 1,95,123 ಮಂದಿ ಮೃತಪಟ್ಟಿದ್ದಾರೆ. ಜನವರಿ 16ರಿಂದ ಏಪ್ರಿಲ್ 25ರವರೆಗೆ 14,19,11,223 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ.

ಏಪ್ರಿಲ್ 25ರವರೆಗೆ ದೇಶದಲ್ಲಿ ಏಪ್ರಿಲ್ 25ರವರೆಗೆ 27,93,21,177 ಮಾದರಿಗಳ ಕೋವಿಡ್ ಪರೀಕ್ಷೆಗಳನ್ನು ಮಾಡಲಾಗಿದೆ. ಏಪ್ರಿಲ್ 25ರ ಭಾನುವಾರ 14,02,367 ಮಾದರಿಗಳ ಕೊರೊನಾ ಪರೀಕ್ಷೆ ಮಾಡಲಾಗಿದೆ ಎಂದು ಐಸಿಎಂಆರ್ ಹೇಳಿದೆ.
ಕರ್ನಾಟಕ ಕೊರೊನಾ ಪ್ರಕರಣಗಳು: ಬೆಂಗಳೂರಿನಲ್ಲೇ 20,733 ಮಂದಿಗೆ ಕೊವಿಡ್-19 ಪಾಸಿಟಿವ್ ಬಂದಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 13,39,201ಕ್ಕೆ ಏರಿಕೆಯಾಗಿದೆ. 24 ಗಂಟೆಗಳಲ್ಲಿ 143 ಬಲಿಯಾಗಿದ್ದು, ಸಾವಿನ ಸಂಖ್ಯೆ 14426ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೂ 10,62,594 ಸೋಂಕಿತರು ಗುಣಮುಖರಾಗಿದ್ದಾರೆ.
ಮಹಾರಾಷ್ಟ್ರದಲ್ಲಿ ಒಂದೇ ದಿನ 66191 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 6,98,354ಕ್ಕೆ ಏರಿಕೆಯಾಗಿದೆ.
ಭಾರತದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತದಿಂದ ಆಗಮಿಸುವ ಪ್ರಯಾಣಿಕ ವಿಮಾನಗಳನ್ನು ನೆದರ್‌ಲ್ಯಾಂಡ್ ರದ್ದುಗೊಳಿಸಿದೆ. ಮೇ 1ರವರೆಗೂ ರದ್ದುಗೊಳಿಸಿರುವುದಾಗಿ ಪ್ರಕಟಿಸಿದೆ.












Click it and Unblock the Notifications