ಭಾರತದಲ್ಲಿ 3,60,960 ಹೊಸ ಕೊರೊನಾ ಪ್ರಕರಣ; ಸಾವಿನ ಸಂಖ್ಯೆಯಲ್ಲಿ ಏರಿಕೆ

ನವದೆಹಲಿ, ಏಪ್ರಿಲ್ 28: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 3,60,960 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಒಂದೇ ದಿನ 3293 ಜನರು ಸೋಂಕಿನಿಂದ ಸಾವನ್ನಪ್ಪಿದ್ದು, ಗುಣಮುಖರಾದವರ ಸಂಖ್ಯೆ 2,61,162ರಷ್ಟಿದೆ.

ಮಂಗಳವಾರ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಮುಖವಾಗಿತ್ತು. ಸೋಮವಾರಕ್ಕೆ ಹೋಲಿಸಿದರೆ ಸುಮಾರು 20 ಸಾವಿರ ಕಡಿಮೆ ಪ್ರಕರಣಗಳು ದಾಖಲಾಗಿದ್ದವು. ಆದರೆ ಮತ್ತೆ ಪ್ರಕರಣಗಳು ಏರುಗತಿಯತ್ತ ಸಾಗಿವೆ.

ಕೇಂದ್ರ ಆರೋಗ್ಯ ಸಚಿವಾಲಯ ದೇಶದಲ್ಲಿನ ಕೊರೊನಾ ಪ್ರಕರಣಗಳ ಕುರಿತು ಹೆಲ್ತ್‌ ಬುಲೆಟಿನ್ ಬಿಡುಗಡೆ ಮಾಡಿದೆ. ಕಳೆದ 24 ಗಂಟೆಗಳಲ್ಲಿ ದಾಖಲಾದ ಪ್ರಕರಣಗಳೊಂದಿಗೆ ಒಟ್ಟಾರೆ ಪ್ರಕರಣಗಳ ಸಂಖ್ಯೆ 1,79,97,267ಕ್ಕೆ ಏರಿಕೆಯಾಗಿದೆ. ದೇಶದಲ್ಲಿನ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 29,78,709 ಆಗಿದೆ.

3,60,960 New Coronavirus Cases Reported In India On April 28

ಇದುವರೆಗೂ ಸೋಂಕಿನಿಂದ 1,48,17,371 ಮಂದಿ ಗುಣಮುಖರಾಗಿದ್ದಾರೆ. ಒಟ್ಟಾರೆ 2,01,187 ಮಂದಿ ಮೃತಪಟ್ಟಿದ್ದಾರೆ. ಜನವರಿ 16ರಿಂದ ಏಪ್ರಿಲ್ 27ರವರೆಗೆ 14,78,27,367 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ.

ಏಪ್ರಿಲ್ 27ರವರೆಗೆ 28,27,03,789 ಮಾದರಿಗಳ ಕೋವಿಡ್ ಪರೀಕ್ಷೆಗಳನ್ನು ಮಾಡಲಾಗಿದೆ. ಏಪ್ರಿಲ್ 27ರ ಸೋಮವಾರ 17,23,912 ಮಾದರಿಗಳ ಕೊರೊನಾ ಪರೀಕ್ಷೆ ಮಾಡಲಾಗಿದೆ ಎಂದು ಐಸಿಎಂಆರ್ ಹೇಳಿದೆ.

ಕರ್ನಾಟಕದಲ್ಲಿ ಕೊರೊನಾ ಪ್ರಕರಣ: ರಾಜ್ಯದಲ್ಲಿ ಮಂಗಳವಾರ ಒಂದೇ ದಿನ ಹೊಸ ಪ್ರಕರಣಗಳ ಸಂಖ್ಯೆ 30 ಸಾವಿರದ ಗಡಿಯನ್ನೂ ದಾಟಿ ಹೋಗಿದೆ. ಮಂಗಳವಾರ 31,830 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 180 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಇದೇ ಅವಧಿಯಲ್ಲಿ 10793 ಸೋಂಕಿತರು ಗುಣಮುಖರಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+