ನೋಯ್ಡಾ: ಭೀಕರ ರಸ್ತೆ ಅಪಘಾತ, ಮೂರು ಸಾವು, ಇಪ್ಪತ್ತು ಮಂದಿ ಗಾಯಾಳು
ನೋಯ್ಡಾ, ಡಿ. 18: ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾ ಎಕ್ಸ್‌ಪ್ರೆಸ್‌ವೇ ಬಳಿ ಭಾನುವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ನಾಲೆಡ್ಜ್ ಪಾರ್ಕ್ ಬಳಿ ಎರಡು ಬಸ್‌ಗಳ ನಡುವೆ ಅಪಘಾತ ಸಂಭವಿಸಿ ಮೂವರು ಸಾವನ್ನಪ್ಪಿರುವ ದುರಂತ ಘಟನೆ ನಡೆದಿದೆ.
ಈ ಭೀಕರ ಅಪಘಾತ ಘಟನೆಯಲ್ಲಿ ಇಪ್ಪತ್ತು ಮಂದಿ ಗಾಯಗೊಂಡಿದ್ದಾರೆ. ವರದಿಗಳ ಪ್ರಕಾರ ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳದಲ್ಲಿ ಗ್ರೇಟರ್ ನೋಯ್ಡಾ ಪೊಲೀಸರು ಹಾಜರಿದ್ದು ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ.












Click it and Unblock the Notifications