ಉತ್ತರ ಪ್ರದೇಶದಲ್ಲಿ ದಲಿತ ವ್ಯಕ್ತಿಯ ಮೇಲೆ ಹಲ್ಲೆ, ಚಪ್ಪಲಿ ನೆಕ್ಕಿಸಿದ ಪ್ರಕರಣ: ಮತ್ತೆ ಮೂವರ ಬಂಧನ

ಲಕ್ನೋ, ಜುಲೈ. 10: ಉತ್ತರ ಪ್ರದೇಶದ ಸೋನಭದ್ರಾ ಜಿಲ್ಲೆಯಲ್ಲಿ ದಲಿತ ವ್ಯಕ್ತಿಯೊಬ್ಬರನ್ನು ಥಳಿಸಿ ಚಪ್ಪಲಿ ನೆಕ್ಕುವಂತೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಆರೋಪಿ, ವಿದ್ಯುತ್ ಇಲಾಖೆಯ ಗುತ್ತಿಗೆ ನೌಕರರಾಗಿದ್ದರು.

ಆರೋಪಿಯ್ನು "ಸೇವೆಯಿಂದ ವಜಾಗೊಳಿಸಲಾಗಿದೆ" ಎಂದು ಪೊಲೀಸರು ಹೇಳಿದ್ದು, ಇನ್ನು ಮೂವರನ್ನು ಬಂಧಿಸಲಾಗಿದೆ ಎಂದು ಸರ್ಕಲ್ ಆಫೀಸರ್ (ಘೋರಾವಾಲ್) ಅಮಿತ್ ಕುಮಾರ್ ಹೇಳಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಒಟ್ಟು 4 ಮಂದಿಯನ್ನು ಬಂಧಿಸಲಾಗಿದೆ. ಭಾನುವಾರ ಸಂಜೆ ಎಲ್ಲರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

3 More Arrested for Forcing Dalit Man to Lick Slippers in Uttar Pradesh

ಜುಲೈ 8 ರಂದು ಪೊಲೀಸರಿಗೆ ಸಲ್ಲಿಸಿದ ದೂರಿನಲ್ಲಿ ಸಂತ್ರಸ್ತ ರಾಜೇಂದ್ರ ಚಮರ್ ಅವರು ಪರಿಶಿಷ್ಟ ಜಾತಿ (ಎಸ್‌ಸಿ) ವರ್ಗಕ್ಕೆ ಸೇರಿದವರು ಎಂದು ಹೇಳಿದ್ದಾರೆ. "ಜುಲೈ 6 ರಂದು, ಅವರು ತಮ್ಮ ತಾಯಿಯ ಚಿಕ್ಕಪ್ಪನ ಸ್ಥಳಕ್ಕೆ ಹೋಗಿದ್ದರು. ಅಲ್ಲಿ ಅವರು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಈ ವೇಳೆ ಲೈನ್‌ಮ್ಯಾನ್ ತೇಜ್‌ ಬಲಿ ಸಿಂಗ್ ಅಲ್ಲಿಗೆ ಸಮಸ್ಯೆ ಬಗೆಹರಿಸಲು ಬಂದಿದ್ದಾರೆ. ಅಲ್ಲಿ ಮಾತಿಗೆ ಮಾತು ಬೆಳೆದು ಜಗಳ ಆರಂಭವಾಗಿದೆ.

ನಂತರ ದೂರುದಾರರ ರಾಜೇಂದ್ರ ಚಮರ್ ವಿರುದ್ಧ ಜಾತಿವಾದದ ಮಾತುಗಳನ್ನಾಡಿದ ಅವರು ಚಪ್ಪಲಿಯನ್ನು ನೆಕ್ಕುವಂತೆ ಮಾಡಿದ್ದಾರೆ. ನಂತರ ಸ್ಥಳೀಯರು ಮಧ್ಯಪ್ರವೇಶಿಸಿದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ರಾಜೇಂದ್ರ ನೀಡಿದ ದೂರಿನ ಆಧಾರದ ಮೇಲೆ, ಪಟೇಲ್ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಮತ್ತು ಸೆಕ್ಷನ್ 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು) , ಭಾರತೀಯ ದಂಡ ಸಂಹಿತೆಯ 504 ಮತ್ತು 506 (ಅಪರಾಧ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ವೈರಲ್ ವಿಡಿಯೋದಲ್ಲಿ ವಿದ್ಯುತ್ ಇಲಾಖೆ ನೌಕರನು ದೂರುದಾರನ ಒಂದು ತೋಳನ್ನು ತಿರುಗಿಸುವುದು, ನೆಲಕ್ಕೆ ತಳ್ಳುವುದು, ಅವನ ಎದೆಯ ಮೇಲೆ ಏರಿ ಹೊಡೆಯುವುದು ಕಂಡುಬಂದಿದೆ. ಜೊತೆಗೆ ಆತನಿಗೆ ಚಪ್ಪಲಿ ನೆಕ್ಕುವಂತೆ ಒತ್ತಾಯಿಸುತ್ತಿರುವ ದೃಶ್ಯವೂ ಕಂಡು ಬಂದಿದೆ.

3 More Arrested for Forcing Dalit Man to Lick Slippers in Uttar Pradesh

"ಆರೋಪಿಗಳಾದ ತೇಜ್‌ ಬಲಿ ಸಿಂಗ್ ಪಟೇಲ್, ಅಜಯ್ ಪಟೇಲ್ ಮತ್ತು ರವಿ ಯಾದವ್ ಕೂಡ ದೂರುದಾರನಿಗೆ ಥಳಿಸಿ, ಕೊಲೆ ಬೆದರಿಕೆ ಹಾಕಿ ಆತನಿಂದ 2,200 ರೂ. ವಸೂಲಿ ಮಾಡಿದ್ದಾರೆ. ಇದರ ಆಧಾರದ ಮೇಲೆ, ಐಪಿಸಿಯ ಸೆಕ್ಷನ್ 386 (ಸುಲಿಗೆ), 355 (ದಾಳಿ ಅಥವಾ ಕ್ರಿಮಿನಲ್ ಬಲ) ಮತ್ತು 120 ಬಿ (ಅಪರಾಧದ ಪಿತೂರಿ) ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆಯ ನಿಬಂಧನೆಗಳನ್ನು ಎಫ್‌ಐಆರ್‌ಗೆ ಸೇರಿಸಲಾಗಿದೆ" ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಬಂಧಿತ ಆರೋಪಿಗಳಿಂದ ಮೂರು ಮೊಬೈಲ್‌ ಫೋನ್‌ಗಳು, ಎರಡು ಮೋಟಾರ್‌ಸೈಕಲ್‌ಗಳು ಮತ್ತು 2,200 ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ)ದ ವಿರುದ್ಧ ವಿರೋಧ ಪಕ್ಷಗಳು ವಾಗ್ದಾಳಿ ನಡೆಸುತ್ತಿದ್ದು, ಈ ಘಟನೆಯು ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ.

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ವರದಿಯಾದ ಘಟನೆಗಿಂತ ಇದೇನು ಕಡಿಮೆಯಲ್ಲ, ಇದು ನಾಚಿಕೆಗೇಡಿನ ಸಂಗತಿ ಎಂದಿದ್ದಾರೆ. ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಸಂಜಯ್ ಸಿಂಗ್ ಅವರು ಬಿಜೆಪಿ ಆಡಳಿತದಲ್ಲಿ ದಲಿತರನ್ನು ಮನುಷ್ಯರಂತೆ ಪರಿಗಣಿಸುವುದಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ರಾಜ್ಯ ಕಾಂಗ್ರೆಸ್ ವಕ್ತಾರ ವಿಕಾಸ್ ಶ್ರೀವಾಸ್ತವ ಘಟನೆಯನ್ನು "ಹೇಯ ಕೃತ್ಯ" ಎಂದು ಕರೆದಿದ್ದಾರೆ.ರೆ ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ವಕ್ತಾರ ಅಂಕುರ್ ಸಕ್ಸೇನಾ ಬಿಜೆಪಿ ದಲಿತರನ್ನು ಅವಮಾನಿಸಿದೆ ಎಂದು ಆರೋಪಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+