• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಶಾಲೆಯಲ್ಲಿ ಅಗ್ನಿ ಅವಘಡ: 2 ವಿದ್ಯಾರ್ಥಿಗಳು ಸೇರಿ ಮೂವರ ಸಾವು

|

ಹರಿಯಾಣ, ಜೂನ್ 8 : ಹರಿಯಾಣದ ಫರೀದಾಬಾದ್‌ ಸಮೀಪದ ಖಾಸಗಿ ಶಾಲೆಯೊಂದರಲ್ಲಿ ಶನಿವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು ಇಬ್ಬರು ವಿದ್ಯಾರ್ಥಿಗಳು ಸೇರಿ ಒಟ್ಟು ಮೂವರು ಮೃತಪಟ್ಟಿದ್ದಾರೆ.

ಕಳೆ ತಿಂಗಳಷ್ಟೇ ಗುಜರಾತಿನ ಸೂರತ್‌ನಲ್ಲಿ ಕೋಚಿಂಗ್ ಸೆಂಟರ್ ಒಂದಕ್ಕೆ ಬೆಂಕಿ ತಗುಲಿ ವಿದ್ಯಾರ್ಥಿಗಳು ಸೇರಿದಂತೆ 22 ಮಂದಿ ಮೃತಪಟ್ಟಿದ್ದರು.

ಶಾಲೆಯಲ್ಲಿ ಬಟ್ಟೆಗಳನ್ನು ಶೇಖರಿಸಿಡುತ್ತಿದ್ದ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಆದರೆ ಅಗ್ನಿಶಾಮಕ ಸಿಬ್ಬಂದಿ ಬರುವುದು ತಡವಾಯಿತು. ಅಷ್ಟರೊಳಗೆ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ. ರಸ್ತೆಗಳು ಕಿರಿದಾಗಿದ್ದರಿಂದ ಅಗ್ನಿ ಶಾಮಕ ದಳದ ವಾಹನ ಬೇಗನೆ ಬರಲು ಸಾಧ್ಯವಾಗಿಲ್ಲ.

ಓರ್ವ ಶಿಕ್ಷಕಿ ಮತ್ತು ಆಕೆಯ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ದೇಹ ಸಂಪೂರ್ಣವಾಗಿ ಸುಟ್ಟಿದ್ದ ಕಾರಣ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಬದುಕಿಸಿಕೊಳ್ಳಲು ಸಾಧ್ಯವಾಗಿಲ್ಲ, ಅವರನ್ನು ಕಾಪಾಡಲು ತೆರಳಿದ್ದ ಇಬ್ಬರಿಗೂ ಕೂಡ ಗಂಭೀರ ಗಾಯವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬೇಸಿಗೆ ರಜೆಯ ಕಾರಣ ಶಾಲೆ ಮುಚ್ಚಿತ್ತಾದರೂ ಆ ಮಹಿಳೆ ಅಲ್ಲಿಯೇ ವಾಸವಿದ್ದರು. ಈ ದುರ್ಘಟನೆಗೆ ನಿಖರವಾದ ಕಾರಣ ಏನೆಂದು ತಿಳಿದುಬಂದಿಲ್ಲ.

English summary
3 people dies in fire at private school in Faridabad on Saturday. Gujarat's Surat where 22 people, mostly students, died last month.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X