ಮೂವರು ಭಯೋತ್ಪಾದಕರನ್ನು ಸದೆಬಡಿದ ಭಾರತೀಯ ಸೇನೆ
ಶ್ರೀನಗರ, ಮೇ 05: ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಮೂವರು ಭಯೋತ್ಪಾದಕರನ್ನು ಹತ್ಯೆಗೈಯ್ಯುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದೆ.
ಇಂದು ಬೆಳಗ್ಗಿನ ಜಾವ ಭಾರತೀಯ ಸೇನೆ ನಡೆಸಿದ ಎನ್ ಕೌಂಟರ್ ದಾಳಿಯಲ್ಲಿಮೂವರು ಭಯೋತ್ಪಾದಕರನ್ನು ಕೊಲ್ಲಲಾಗಿದ್ದು, ಈ ಸಂದರ್ಭದಲ್ಲಿ ಮೂವರು ಸಿಆರ್ ಪಿಎಫ್ ಸಿಬ್ಬಂದಿಗಳು ಗಾಯಗೊಂಡಿದ್ದಾರೆ.
"ಇದೊಂದು ಕ್ಲೀನ್ ಆಪರೇಶನ್. ಎನ್ ಕೌಂಟರ್ ಸಮಯದಲ್ಲಿ ನಾಗರಿಕರಿಗೆ ಯಾವುದೇ ರೀತಿಯ ಹಾನಿಯಾಗಿಲ್ಲ. ನಮಗೆ ಸಹಜಾರ ನೀಡಿದ ಶ್ರೀನಗರ ಜನತೆಗೆ ನನ್ನ ಕೃತಜ್ಞತೆಗಳು" ಎಂದು ಎನ್ಕೌಂಟರ್ ನಂತರ ಸಿಆರ್ ಪಿಎಫ್ ಛತ್ತಾಬಲ್ ಐಜಿ ರವೀಂದ್ರ ಸಹಿ ಹೇಳಿದ್ದಾರೆ.

ಕಳೆದ ತಿಂಗಳು ಅಂದರೆ ಏಪ್ರಿಲ್ 1 ರಂದು ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ರಕ್ಷಣಾ ಪಡೆಯ ಸಿಬ್ಬಂದಿ ನಡೆಸಿದ ಎನ್ ಕೌಟರ್ ದಾಳಿಯಲ್ಲಿ ಎಂಟು ಉಗ್ರಗಾಮಿಗಳನ್ನು ಹೊಡೆದುರುಳಿಸಿದ್ದನ್ನು ಇಲ್ಲಿ ಸ್ಮರಿಸಬಹುದು.












Click it and Unblock the Notifications