ಕಾಶ್ಮೀರದಲ್ಲಿ ಮೂವರು ಉಗ್ರರನ್ನು ಸದೆಬಡಿದ ಭಾರತೀಯ ಸೇನೆ
ಪುಲ್ವಾಮಾ, ಅಕ್ಟೋಬರ್ 18: ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಭಾರತೀಯ ಸೇನೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದೆ.
ಹತ್ಯೆಯಾದ ಮೂವರು ಭಯೋತ್ಪಾದಕರೂ ತೆಹ್ರಿಕ್ ಉಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದವರೆಂಬುದು ತಿಳಿದುಬಂದಿದೆ.
ಬುಧವಾರವಷ್ಟೇ ಶ್ರೀನಗರದಲ್ಲಿ ನಡೆದಿದ್ದ ಎನ್ ಕೌಂಟರ್ ದಾಳಿಯಲ್ಲಿ ಮೂವರು ಉಗ್ರರನ್ನು ಸದೆಬಡಿಯುವಲ್ಲಿ ಸೇನೆ ಯಶಸ್ವಿಯಾಗಿತ್ತು. ಈ ಸಂದರ್ಭದಲ್ಲಿ ಉಗ್ರರು ನಡೆಸಿದ ಪ್ರತಿದಾಳಿಯಲ್ಲಿ ಓರ್ವ ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದರು.

ಹಿಜ್ಬುಲ್ ಮುಜಾಹಿದೀನ್ ಭಯೋತ್ಪಾದಕ ಮನನ್ ಬಶಿರ್ ವಾನಿ ಮತ್ತು ಇನ್ನೋರ್ವ ಮೋಸ್ಟ್ ವಾಂಟೆಡ್ ಭಯೋತ್ಪಾದಕನನ್ನು ಇತ್ತೀಚೆಗಷ್ಟೇ ಭಾರತೀಯ ಸೇನೆ ಹತ್ಯೆಗೈದಿತ್ತು. ಈ ಹತ್ಯೆಯ ನಂತರ ಕಣಿವೆ ರಾಜ್ಯದಲ್ಲಿ ಉಗ್ರ ಚಟುವಟಿಕೆ ಮತ್ತಷ್ಟು ಹೆಚ್ಚಾಗಿದೆ.
ಭಾರತದಲ್ಲಿ ನೆಲೆಯೂರಲು ಮಸೀದಿಗಳಿಗೆ ಲಷ್ಕರ್ ಉಗ್ರರಯ ಹಣ ಸಂದಾಯ ಮಾಡುತ್ತಿರುವುದು ಮತ್ತು ಭಾರತದ ಗಡಿ ಭಾಗಗಳಲ್ಲಿ ಉಗ್ರ ದಾಳಿ ನಡೆಯುವ ಮುನ್ಸೂಚನೆಯನ್ನು ಗುಪ್ತಚರ ಇಲಾಖೆ ನೀಡಿರುವುದು ಭಾರತೀಯರಲ್ಲಿ ಆತಂಕ ಸೃಷ್ಟಿಸಿದೆ. ಈ ಕಾರಣದಿಂದ ಗಡಿಯಲ್ಲಿ ಮತ್ತಷ್ಟು ಬಿಗಿಭದ್ರತೆ ನಿಯೋಜಿಸಲಾಗಿದೆ.












Click it and Unblock the Notifications