ಕಾನ್ಪುರದ ಮೂರು ಅಂತಸ್ತಿನ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: 3 ಕಾರ್ಮಿಕರ ಸಾವು

ಕಾನ್ಪುರ, ಡಿಸೆಂಬರ್‌ 16: ಇಲ್ಲಿನ ಫಜಲ್‌ಗುಂಜ್ ಕೈಗಾರಿಕಾ ಪ್ರದೇಶದಲ್ಲಿರುವ ಮೂರು ಅಂತಸ್ತಿನ ಸೈಕಲ್ ಬಿಡಿಭಾಗಗಳನ್ನು ತಯಾರಿಸುವ ಕಾರ್ಖಾನೆಯಲ್ಲಿ ಶುಕ್ರವಾರ ಸಂಭವಿಸಿದ ದೊಡ್ಡ ಬೆಂಕಿ ಅನಾಹುತದಲ್ಲಿ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಈ ಬೆಂಕಿ ಅವಘಡದಲ್ಲಿ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ಸಂಭವಿಸಿದಾಗ ಸಂತ್ರಸ್ತರು ರಾತ್ರಿ ಪಾಳಿಯಲ್ಲಿದ್ದರು. ಇವರ ಜೊತೆಗಿದ್ದ ಇತರ ಮೂವರು ಗಾಯಗೊಳ್ಳದೆ ಘಟಕದಿಂದ ಹೊರಬರುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಉನ್ನಾವೊದ ಜೈ ಪ್ರಕಾಶ್ (50), ಕಾನ್ಪುರದ ಸಚೇಂದ್ರಿಯ ನರೇಂದ್ರ ಅಲಿಯಾಸ್ ಬಿನ್ನಿ (40) ಮತ್ತು ಕಾನ್ಪುರದ ಶಿವರಾಜಪುರದ ರಾಜು ಗೌತಮ್ (28) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಎಲ್ಎಲ್ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಕಿ ಅನಾಹುತಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಆದರೆ, ಇದು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಎಂದು ತೋರುತ್ತದೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.

3 workers killed, 6 hurt in blaze at three-storey factory in Kanpur

ಕುಶನ್‌ಗಳು ಮತ್ತು ಸೈಕಲ್ ಪೆಡಲ್‌ಗಳನ್ನು ತಯಾರಿಸುವ ಎಸ್‌ಕೆ ಇಂಡಸ್ಟ್ರೀಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಘಟನೆಯ ಕುರಿತು ತನಿಖೆ ನಡೆಸಲಾಗುತ್ತಿದೆ ಮತ್ತು ಅಧಿಕಾರಿಗಳು ಸ್ಥಳದಿಂದ ಮಾದರಿಗಳನ್ನು ಸಂಗ್ರಹಿಸುತ್ತಿದ್ದಾರೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ವಿಶಾಕ್ ಜಿ ಅಯ್ಯರ್ ಹೇಳಿದ್ದಾರೆ.

ಬೆಂಕಿ ಅವಘಡಕ್ಕೆ ಸ್ಪಷ್ಟ ಕಾರಣ ಏನು ಎಂಬುದು ತಿಳಿದುಬಂದಿಲ್ಲ.

ಕಾನ್ಪುರವು ಉತ್ತರ ಪ್ರದೇಶದ ಎರಡನೇ ಅತಿ ದೊಡ್ಡ ನಗರವಾಗಿದೆ. ಇದು ಐತಿಹಾಸಿಕ ಮಹತ್ವವನ್ನೂ ಪಡೆದುಕೊಂಡಿದೆ. ಈ ನಗರದಲ್ಲಿ ಹಲವಾರು ಕಾರ್ಖಾನೆಗಳಿವೆ. ಇದು ಲಕ್ಷಾಂತರ ಕಾರ್ಮಿಕರಿಗೆ ಕೆಲಸ ಒದಗಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+