ಜೈಪುರದಲ್ಲಿ ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ
ಜೈಪುರ, ಜುಲೈ 04: ಆಟವಾಡುತ್ತಿದ್ದ ಮೂರು ವರ್ಷದ ಮಗುವನ್ನು ನೆರೆ ಮನೆಯ ವ್ಯಕ್ತಿಯೇ ಅಪಹರಿಸಿ, ಅತ್ಯಾಚಾರ ಎಸಗಿದ ಘಟನೆ ರಾಜಸ್ಥಾನ ಜೈಪುರದಲ್ಲಿ ನಿನ್ನೆ(ಜುಲೈ 03) ನಡೆದಿದೆ.
ಕಾಮುಕ ಆರೋಪಿಯನ್ನು ಪವನ್ ರಾಯ್ಗರ್ ಎಂದು ಗುರುತಿಸಲಾಗಿದ್ದು, ಘಟನೆಯ ನಂತರ ಆತನನ್ನು ಸಂತ್ರಸ್ಥ ಬಾಲಕಿಯ ತಾಯಿ ಹಿಡಿಯಲು ಪ್ರಯತ್ನಿಸಿದರೂ ಆತ ನಾಪತ್ತೆಯಾಗಿದ್ದಾನೆ.
ಮನೆಯ ಹೊರಗೆ ಇತರ ಮಕ್ಕಳೊಮದಿಗೆ ಆಡುತ್ತಿದ್ದ ಬಾಲಕಿಯನ್ನು ಮನೆಯ ಬಳಿಯಲ್ಲಿಯೇ, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಈತ ಅತ್ಯಾಚಾರ ಎಸಗಿದ್ದಾನೆ.

ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಆರೋಪಿ ಪವನ್ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಜು.1 ರಂದು ಭಾನುವಾರ ಮಧ್ಯಪ್ರದೇಶ ಸತ್ನಾ ಜಿಲ್ಲೆಯಲ್ಲಿ ನಾಲ್ಕು ವರ್ಷದ ಬಾಲಕಿ ಮೇಲೆ ಅತಿಥಿ ಶಿಕ್ಷಕನೊಬ್ಬ ಅತ್ಯಾಚಾರ ಎಸಗಿದ ಹೀನಾಯ ಘಟನೆ ನಡೆದಿತ್ತು. ಈ ಘಟನೆಯಲ್ಲಿ ಶಿಕ್ಷಕನನ್ನು ಬಂಧಿಸಲಾಗಿದ್ದು, ಆತ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದರು.












Click it and Unblock the Notifications