ಮದುವೆಯಲ್ಲಿ 30 ಜನರು ಮಾತ್ರ ಪಾಲ್ಗೊಳ್ಳಲು ಅವಕಾಶ!

ಚಂಡೀಗಢ್, ಜುಲೈ 13 : ಕೊರೊನಾ ವೈರಸ್ ಸೋಂಕಿನ ಪ್ರಕರಣ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಪಂಜಾಬ್ ಸರ್ಕಾರ ಜನರು ಹೆಚ್ಚಾಗಿ ಸೇರುವುದಕ್ಕೆ ನಿರ್ಬಂಧ ವಿಧಿಸಿದೆ. ರಾಜ್ಯದಲ್ಲಿನ ಒಟ್ಟು ಸೋಂಕಿನ ಸಂಖ್ಯೆ 7,821.

ಸೋಮವಾರ ಪಂಜಾಬ್ ಮುಖ್ಯಮಂತ್ರಿಗಳ ಕಾರ್ಯಾಲಯ ಈ ಕುರಿತು ಆದೇಶ ಹೊರಡಿಸಿದೆ. ಸಾರ್ವಜನಿಕ ಸ್ಥಳದಲ್ಲಿ 5ಕ್ಕಿಂತ ಹೆಚ್ಚು ಜನರು ಸೇರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಸಾಮಾಜಿಕ ಅಂತರ ಕಾಪಾಡಬೇಕು ಎಂದು ತಿಳಿಸಲಾಗಿದೆ.

30 People Can Atend Marriage And Other Functions In Panjab

ವಿವಾಹ ಸೇರಿದಂತೆ ಇತರ ಕಾರ್ಯಕ್ರಮಗಳಲ್ಲಿ 30 ಜನರು ಮಾತ್ರ ಪಾಲ್ಗೊಳ್ಳಬಹುದಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಇಷ್ಟು ದಿನ ವಿವಾಹ, ನಿಶ್ಚಿತಾರ್ಥ ಮುಂತಾದ ಕಾರ್ಯಕ್ರಮಗಳಲ್ಲಿ 50 ಜನರು ಪಾಲ್ಗೊಳ್ಳಲು ಅವಕಾಶವನ್ನು ನೀಡಲಾಗಿತ್ತು.

ಕೊರೊನಾ ಲಾಕ್ ಡೌನ್ ನಿಯಮಗಳನ್ನು ಘೋಷಣೆ ಮಾಡಿದಾಗಲೇ ಕೇಂದ್ರ ಸರ್ಕಾರ ವಿವಾಹ ಸೇರಿದಂತೆ ಇತರ ಕಾರ್ಯಕ್ರಮಗಳಲ್ಲಿ 50ಕ್ಕಿಂತ ಹೆಚ್ಚು ಜನರು ಪಾಲ್ಗೊಳ್ಳುವಂತಿಲ್ಲ ಎಂದು ಸೂಚನೆ ನೀಡಿತ್ತು.

ವಿವಾಹ ಸಮಾರಂಭದಲ್ಲಿ 50, ಅಂತ್ಯ ಸಂಸ್ಕಾರದಲ್ಲಿ 30 ಜನರು ಪಾಲ್ಗೊಳ್ಳಲು ಕೇಂದ್ರ ಸರ್ಕಾರ ಅವಕಾಶ ನೀಡಿತ್ತು. ಈಗ ಪಂಜಾಬ್ ಸರ್ಕಾರ ವಿವಾಹದಲ್ಲಿ 30 ಜನರು ಮಾತ್ರ ಪಾಲ್ಗೊಳ್ಳಬಹುದು ಎಂದು ಹೇಳಿದೆ.

ಪಂಜಾಬ್‌ನಲ್ಲಿ ಒಟ್ಟು ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 7,821. 199 ಜನರು ರಾಜ್ಯದಲ್ಲಿ ಇದುವರೆಗೂ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕೊರೊನಾ ಸೋಂಕಿನ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸರ್ಕಾರ ಮಾರ್ಗಸೂಚಿಯಲ್ಲಿ ಕೆಲವು ಬದಲಾವಣೆ ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+