ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹರಿಯಾಣದ ರಾಷ್ಟ್ರೀಯ ಹೆದ್ದಾರಿಯಲ್ಲಿ 30 ವಾಹನಗಳು ಪರಸ್ಪರ ಡಿಕ್ಕಿ, 12 ಮಂದಿ ಗಾಯಾಳು

|
Google Oneindia Kannada News

ಚಂಡೀಗಢ, ಡಿ. 18: ಹರಿಯಾಣದ ಕರ್ನಾಲ್ ರಾಷ್ಟ್ರೀಯ ಹೆದ್ದಾರಿ - 44 ರಲ್ಲಿ ಮಂಜಿನಿಂದಾಗಿ ಭಾನುವಾರ ಮೂರು ಸ್ಥಳಗಳಲ್ಲಿ ಸರಣಿ ರಸ್ತೆ ಅಪಘಾತಗಳು ಸಂಭವಿಸಿವೆ. ಮೂರೂ ಸ್ಥಳಗಳಲ್ಲಿ 30 ವಾಹನಗಳು ಪರಸ್ಪರ ಡಿಕ್ಕಿ ಹೊಡೆದಿದ್ದು, ಇದರಲ್ಲಿ 12 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನೆಯ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ನೋಯ್ಡಾ: ಭೀಕರ ರಸ್ತೆ ಅಪಘಾತ, ಮೂರು ಸಾವು, ಇಪ್ಪತ್ತು ಮಂದಿ ಗಾಯಾಳುನೋಯ್ಡಾ: ಭೀಕರ ರಸ್ತೆ ಅಪಘಾತ, ಮೂರು ಸಾವು, ಇಪ್ಪತ್ತು ಮಂದಿ ಗಾಯಾಳು

ಕುಟೆಲ್ ಮೇಲ್ಸೇತುವೆ ಬಳಿ ಮೊದಲ ಅಪಘಾತ ಸಂಭವಿಸಿದೆ. ಈ ವೇಳೆ 15 ರಿಂದ 16 ವಾಹನಗಳು ಪರಸ್ಪರ ಡಿಕ್ಕಿ ಹೊಡೆದಿವೆ. ಟ್ರಕ್‌ಗಳು, ಕಾರುಗಳು, ಟ್ರ್ಯಾಕ್ಟರ್ ಟ್ರ್ಯಾಲಿಗಳು ಮತ್ತು ಬಸ್‌ಗಳು ಪರಸ್ಪರ ಅಪಘಾತಕ್ಕೀಡಾಗಿವೆ.

30 vehicles collided on National Highway in Haryana Sunday

ಈ ಹಠಾತ್ ಅಪಘಾತದಿಂದ ಪೊಲೀಸ್ ಇಲಾಖೆ ಹಾಗೂ ವಾಹನ ಚಾಲಕರಲ್ಲಿ ಆತಂಕ ಮನೆ ಮಾಡಿದೆ. ಅಪಘಾತದ ನಂತರ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದು, ಟ್ರಾಫಿಕ್ ಜಾಮ್ ಉಂಟಾಗಿದೆ.

ಅಪಘಾತಕ್ಕೀಡಾದ ವಾಹನಗಳಿಂದ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್‌ ಆಗಿತ್ತು. ಅಪಘಾತದ ಸಮಯದಲ್ಲಿ, ಗಾಯಾಳುಗಳ ಕಿರುಚಾಟವು ದೂರದವರೆಗೆ ಕೇಳಿಸುತ್ತಿತ್ತು ಎಂದು ಸ್ಥಳೀಯರು ಹೇಳಿದ್ದಾರೆ.

ಇನ್ನೊಂದು ಕಡೆ ಹರಿಯಾಣ ರಸ್ತೆ ಮಾರ್ಗದಲ್ಲಿ ಎರಡು ಬಸ್‌ಗಳು ಕೂಡ ಅಪಘಾತಕ್ಕೀಡಾಗಿವೆ. ಇದರಲ್ಲಿ ಕೆಲವು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

30 vehicles collided on National Highway in Haryana Sunday

ಇದಲ್ಲದೆ, ಡಸ್ಟರ್ ಕಾರೊಂದು ಹರಿಯಾಣ ರೋಡ್‌ವೇಸ್ ಬಸ್‌ನಡಿಗೆ ಸಿಲುಕಿದೆ. ಸರಣಿ ಅಪಘಾತದಿಂದಾಗಿ ಹೆದ್ದಾರಿಯಲ್ಲಿ ವಾಹನಗಳ ಅವಶೇಷಗಳು ಅಲ್ಲಲ್ಲಿ ಕಂಡು ಬರುತ್ತಿದ್ದವು.

ಮತ್ತೊಂದೆಡೆ, ಮಧುಬನ್ ಬಳಿ ಎರಡನೇ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 10 ರಿಂದ 12 ವಾಹನಗಳು ಜಕ್ಕಂ ಆಗಿವೆ. ಅಪಘಾತದಲ್ಲಿ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪೊಲೀಸರು ಗಾಯಾಳುಗಳನ್ನು ಆಂಬ್ಯುಲೆನ್ಸ್ ಸಹಾಯದಿಂದ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಗಾಯಾಳುಗಳ ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆ.

ಕರ್ನಾಲ್ ಟೋಲ್ ಬಳಿ ಮೂರನೇ ಅಪಘಾತ ಸಂಭವಿಸಿದೆ. ಪೊಲೀಸ್ ಅಧಿಕಾರಿಗಳ ಪ್ರಕಾರ, ಮಂಜಿನಿಂದಾಗಿ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಇದರಲ್ಲಿ 30 ವಾಹನಗಳು ಪರಸ್ಪರ ಡಿಕ್ಕಿ ಹೊಡೆದು ಅಪಘಾತವಾದ ಬಗ್ಗೆ ಮಾಹಿತಿ ಲಭಿಸಿದೆ. ಘಟನೆಯಲ್ಲಿ 12 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

English summary
30 vehicles collided on National Highway in Haryana due to fog, 12 people injured. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X