ಭಾರತ; 30,254 ಹೊಸ ಕೋವಿಡ್ ಪ್ರಕರಣ ದಾಖಲು
ನವದೆಹಲಿ, ಡಿಸೆಂಬರ್ 13: ಭಾರತದಲ್ಲಿ 24 ಗಂಟೆಯಲ್ಲಿ 30,254 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ದೇಶದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 98,57,029ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. 24 ಗಂಟೆಯಲ್ಲಿ ದೇಶದಲ್ಲಿ 391 ಜನರು ಮೃತಪಟ್ಟಿದ್ದಾರೆ. ದೇಶದಲ್ಲಿ ಒಟ್ಟು ಮೃತಪಟ್ಟವರ ಸಂಖ್ಯೆ 1,43,019. ದೇಶದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,56,546.
ಕಳೆದ 24 ಗಂಟೆಯಲ್ಲಿ 33,136 ಜನರು ಗುಣಮುಖಗೊಂಡು ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಇದುವರೆಗೂ 93,57,464 ಜನರು ಗುಣಮುಖಗೊಂಡಿದ್ದಾರೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ಭಾರತದಲ್ಲಿ ಡಿಸೆಂಬರ್ 12ರ ತನಕ 15,37,11,833 ಮಾದರಿಗಳ ಪರೀಕ್ಷೆಗಳನ್ನು ನಡೆಸಲಾಗಿದೆ. ಡಿಸೆಂಬರ್ 12ರ ಶನಿವಾರ 10,14,434 ಮಾದರಿಗಳ ಪರೀಕ್ಷೆ ನಡೆಸಲಾಗಿದೆ ಎಂದು ಐಸಿಎಂಆರ್ ಹೇಳಿದೆ.
ಯಾವ ರಾಜ್ಯದಲ್ಲಿ ಎಷ್ಟು?: ಮಹಾರಾಷ್ಟ್ರ ರಾಜ್ಯದಲ್ಲಿ 4,259 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 18,76,699 ಆಗಿದೆ. ಸಕ್ರಿಯ ಪ್ರಕರಣಗಳು 73,542.
ಕರ್ನಾಟಕದಲ್ಲಿ 1,203 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 9,00,214. ರಾಜ್ಯದಲ್ಲಿನ ಸಕ್ರಿಯ ಪ್ರಕರಣಗಳು 18,254 ಆಗಿದೆ.
ಆಂಧ್ರ ಪ್ರದೇಶದಲ್ಲಿ 510 ಹೊಸ ಪ್ರಕರಣಗಳು ದಾಖಲಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 8,75,025 ಆಗಿದೆ. ತಮಿಳುನಾಡಿನಲ್ಲಿ1,218 ಹೊಸ ಪ್ರಕರಣ ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 7,97,693ಕ್ಕೆ ಏರಿಕೆಯಾಗಿದೆ.
ಕೇರಳದಲ್ಲಿ 5,949. ದೆಹಲಿಯಲ್ಲಿ 1935. ಉತ್ತರ ಪ್ರದೇಶದಲ್ಲಿ 1,410. ಪಶ್ಚಿಮ ಬಂಗಾಳದಲ್ಲಿ 2,710 ಹೊಸ ಪ್ರಕರಣಗಳು ದಾಖಲಾಗಿವೆ.












Click it and Unblock the Notifications