ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ 40 ರಿಂದ 30 ಸಾವಿರಕ್ಕೆ ತಗ್ಗಿದ ಕೊರೊನಾವೈರಸ್ ಸಂಖ್ಯೆ!

|
Google Oneindia Kannada News

ನವದೆಹಲಿ, ಆಗಸ್ಟ್ 3: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆಯ ಭೀತಿ ನಡುವೆ ಸೋಂಕಿತ ಪ್ರಕರಣಗಳ ಸಂಖ್ಯೆ ಮತ್ತೊಮ್ಮೆ ಇಳಿಮುಖವಾಗಿದೆ. ಒಂದೇ ದಿನ ಸೋಂಕಿತ ಪ್ರಕರಣಗಳ ಸಂಖ್ಯೆ 10,000 ಅಂತರ ಕಂಡು ಬಂದಿದೆ.

ಕಳೆದ 24 ಗಂಟೆಗಳಲ್ಲಿ 30549 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 38,887 ಸೋಂಕಿತರು ಗುಣಮುಖರಾಗಿದ್ದು, ಇದೇ ಅವಧಿಯಲ್ಲಿ 422 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.

 ಲಸಿಕೆ ಸುದ್ದಿ: ಭಾರತದಲ್ಲಿ 47.78 ಕೋಟಿ ಜನರಿಗೆ ಕೊರೊನಾವೈರಸ್ ಇಂಜೆಕ್ಷನ್! ಲಸಿಕೆ ಸುದ್ದಿ: ಭಾರತದಲ್ಲಿ 47.78 ಕೋಟಿ ಜನರಿಗೆ ಕೊರೊನಾವೈರಸ್ ಇಂಜೆಕ್ಷನ್!

ಮಂಗಳವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 3,17,26,507ಕ್ಕೆ ಏರಿಕೆಯಾಗಿದೆ. ಈವರೆಗೂ 3,08,96,354 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 4,25,195 ಜನರು ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ 4,04,958 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಕೊವಿಡ್-19 ಸೋಂಕಿನ ಪರೀಕ್ಷೆ ಪ್ರಮಾಣ

ದೇಶದಲ್ಲಿ ಕೊವಿಡ್-19 ಸೋಂಕಿನ ಪರೀಕ್ಷೆ ಪ್ರಮಾಣ

ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಕಡಿಮೆಯಾಗುವುದಲ್ಲೆ ಪರೀಕ್ಷೆ ಪ್ರಮಾಣ ಕಡಿಮೆಯಾಗಿರುವುದೂ ಕೂಡಾ ಒಂದು ಪ್ರಮುಖ ಕಾರಣವಾಗಿದೆ. ಕಳೆದ 24 ಗಂಟೆಗಳಲ್ಲಿ 16,49,295 ಜನರಿಗೆ ಕೊರೊನಾವೈರಸ್ ಸೋಂಕಿನ ಪರೀಕ್ಷೆ ನಡೆಸಲಾಗಿದ್ದು, ಈವರೆಗೂ 47,12,94,789 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

ಭಾರತದಲ್ಲಿ 4 ಹಂತಗಳ ಲಸಿಕೆ ವಿತರಣೆ ಅಭಿಯಾನ

ಭಾರತದಲ್ಲಿ 4 ಹಂತಗಳ ಲಸಿಕೆ ವಿತರಣೆ ಅಭಿಯಾನ

ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ.

18-44 ವಯೋಮಾನದವರಿಗೆ ಲಸಿಕೆ ನೀಡಲು ಆದ್ಯತೆ

18-44 ವಯೋಮಾನದವರಿಗೆ ಲಸಿಕೆ ನೀಡಲು ಆದ್ಯತೆ

ಕೊರೊನಾವೈರಸ್ ಎರಡನೇ ಅಲೆಯಲ್ಲಿ ಅತಿಹೆಚ್ಚು ಸೋಂಕು ತಗುಲಿರುವುದು ಹಾಗೂ ಸಾವಿನ ಸಂಖ್ಯೆಯಲ್ಲಿ ಅತಿಹೆಚ್ಚು ಮಧ್ಯವಯಸ್ಕರ ಸಂಖ್ಯೆಯೇ ಹೆಚ್ಚಾಗಿದೆ. ಈ ಹಿನ್ನೆಲೆ 18 ರಿಂದ 44 ವರ್ಷದ ವಯೋಮಾನದವರಿಗೆ ಲಸಿಕೆ ನೀಡುವುದಕ್ಕೆ ಒತ್ತು ನೀಡಲಾಗುತ್ತಿದೆ. ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ದೇಶದಲ್ಲಿ ಬುಧವಾರ ಒಂದೇ ದಿನ 18 ರಿಂದ 44 ವಯೋಮಾನದ 27,76,234 ಜನರಿಗೆ ಮೊದಲ ಡೋಸ್ ಹಾಗೂ 4,82,253 ಮಂದಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ದೇಶದಲ್ಲಿ ಇದೇ ವಯೋಮಾನದ 15,99,07,360 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 93,86,280 ಜನರು ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ.

ಭಾರತದಲ್ಲಿ ಈವರೆಗೂ ಲಸಿಕೆ ಪಡೆದವರ ಸಂಖ್ಯೆ

ಭಾರತದಲ್ಲಿ ಈವರೆಗೂ ಲಸಿಕೆ ಪಡೆದವರ ಸಂಖ್ಯೆ

ದೇಶದಲ್ಲಿ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 199 ದಿನಗಳಲ್ಲಿ 47.85 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 61,09,587 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಈವರೆಗೂ 47,85,44,114 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೊರೊನಾವೈರಸ್ ಲಸಿಕೆ ಪೂರೈಕೆ ಮತ್ತು ಲಭ್ಯತೆ

ಕೊರೊನಾವೈರಸ್ ಲಸಿಕೆ ಪೂರೈಕೆ ಮತ್ತು ಲಭ್ಯತೆ

2021ರ ಆಗಸ್ಟ್ 02ರ ಅಂಕಿ-ಅಂಶಗಳ ಪ್ರಕಾರ, 49,64,98,050 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಈ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.

ಕೊರೊನಾವೈರಸ್ ಲಸಿಕೆ ಪೂರೈಕೆ ಮತ್ತು ಲಭ್ಯತೆ ಪಟ್ಟಿ:

* ಪೂರೈಕೆಯಾದ ಲಸಿಕೆ ಪ್ರಮಾಣ - 49,64,98,050

* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 9,84,610

* ಕೊವಿಡ್-19 ಲಸಿಕೆಯ ಲಭ್ಯತೆ - 3,14,34,654

English summary
30549 New Coronavirus Cases Reported in India in the Last 24 Hours.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X