ಭಾರತದಲ್ಲಿ ಮತ್ತೆ 31,522 ಕೊರೊನಾ ಸೋಂಕಿತರು ಪತ್ತೆ
ನವದೆಹಲಿ, ಡಿಸೆಂಬರ್ 10: ಭಾರತದಲ್ಲಿ ಇಂದು 31,522 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
ಒಟ್ಟು 97,67,372 ಪ್ರಕರಣಗಳಿವೆ, ಒಂದೇ ದಿನದಲ್ಲಿ 412 ಮಂದಿ ಮೃತಪಟ್ಟಿದ್ದಾರೆ. ಇದುವರೆಗೆ 1,41,772 ಮಂದಿ ಸಾವನ್ನಪ್ಪಿದ್ದಾರೆ. 3,72,293 ಸಕ್ರಿಯ ಪ್ರಕರಣಗಳಿವೆ. ಒಂದೇ ದಿನದಲ್ಲಿ 37,725 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಇದುವರೆಗೆ 92,53,306 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.












Click it and Unblock the Notifications