ಭಾರತದಲ್ಲಿ ಒಂದೇ ದಿನ 31118 ಮಂದಿಗೆ ಕೊರೊನಾವೈರಸ್
ನವದೆಹಲಿ, ಡಿಸೆಂಬರ್.01: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಇಳಿಮುಖವಾಗಿದೆ. ದೇಶದಲ್ಲಿ ಒಂದೇ ದಿನ 31118 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
ಕಳೆದ 24 ಗಂಟೆಗಳಲ್ಲಿ 41,985 ಮಂದಿ ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, 482 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶಾದ್ಯಂತ ಕೊವಿಡ್-19 ಸೋಂಕಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.
ಭಾರತದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 94,62,810ಕ್ಕೆ ಏರಿಕೆಯಾಗಿದೆ. ಮಹಾಮಾರಿಗೆ ದೇಶದಲ್ಲಿ ಈವರೆಗೂ 1,37,621 ಮಂದಿ ಪ್ರಾಣ ಬಿಟ್ಟಿದ್ದಾರೆ. 88,89,585 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಉಳಿದಂತೆ 4,35,603 ಸಕ್ರಿಯ ಪ್ರಕರಣಗಳಿವೆ.

ಜಗತ್ತಿನಲ್ಲಿ ಕೊರೊನಾವೈರಸ್ ಪ್ರಕರಣ:
ವಿಶ್ವದಲ್ಲಿ 6,35,84,870 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಮಹಾಮಾರಿಗೆ ಈವರೆಗೂ 14,73,746 ಜನರು ಪ್ರಾಣ ಬಿಟ್ಟಿದ್ದಾರೆ. ಜಗತ್ತಿನಲ್ಲಿ ಈವರೆಗೂ 4,39,80,327 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದಾರೆ. ಅತಿಹೆಚ್ಚು ಕೊರೊನಾವೈರಸ್ ಸೋಂಕಿತರು ಮತ್ತು ಸಾವಿನ ಸಂಖ್ಯೆಯು ಹೆಚ್ಚಾಗಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಅಮೆರಿಕಾ ಅಗ್ರಸ್ಥಾನದಲ್ಲಿ ಗುರುತಿಸಿಕೊಂಡಿದೆ. ವಿಶ್ವದಲ್ಲೇ ಅತಿಹೆಚ್ಚು ಜನಸಂಖ್ಯೆ ಹೊಂದಿರುವ ಎರಡನೇ ರಾಷ್ಟ್ರ ಭಾರತವು ಇದರಲ್ಲೂ ಎರಡನೇ ಸ್ಥಾನದಲ್ಲಿ ಗುರುತಿಸಿಕೊಂಡಿದೆ.












Click it and Unblock the Notifications