Shocking News: ಭಾರತದಲ್ಲಿ ಒಂದೇ ದಿನ 3 ಲಕ್ಷದ ಗಡಿ ದಾಟಿದ ಕೊರೊನಾ!
ನವದೆಹಲಿ, ಏಪ್ರಿಲ್ 22: ಇಡೀ ಜಗತ್ತಿನಲ್ಲಿ ಎಂದೂ ಕಾಣದ ಹಾಗೂ ಯಾವ ದೇಶದಲ್ಲಿ ದಾಖಲಾಗದಷ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಭಾರತದಲ್ಲಿ ಒಂದೇ ದಿನ ವರದಿಯಾಗಿವೆ. ದೇಶದಲ್ಲಿ ಎರಡನೇ ಎಷ್ಟೊಂದು ವೇಗವಾಗಿ ಹರಡುತ್ತಿದೆ ಎಂಬುದಕ್ಕೆ ಗುರುವಾರದ ಕೊವಿಡ್-19 ಅಂಕಿ-ಅಂಶಗಳೇ ಕೈಗನ್ನಡಿಯಾಗಿದೆ.
ಕಳೆದ 24 ಗಂಟೆಗಳಲ್ಲಿ 3,14,835 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, 2,104 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದಾರೆ. ಒಂದು ದಿನದಲ್ಲಿ 1,78,841 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದಾರೆ.
ಗುರುವಾರದ ಅಂಕಿ-ಅಂಶಗಳ ಪ್ರಕಾರ, ದೇಶದಲ್ಲಿ ಒಟ್ಟು 1,59,30,965 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈವರೆಗೂ 1,34,54,880 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 1,84,657 ಸಾವಿನ ಪ್ರಕರಣಗಳು ಪತ್ತೆಯಾಗಿವೆ. ಭಾರತದಲ್ಲಿ 22,91,428 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಕೊವಿಡ್-19 ಪ್ರಕರಣಗಳ ಚಿತ್ರಣವೇ ಬದಲು!
ಭಾರತದಲ್ಲಿ ಬುಧವಾರ ಒಂದೇ ಒಂದು ದಿನದಲ್ಲಿ 295041 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿತ್ತು. ಕಳೆದ 24 ಗಂಟೆಗಳಲ್ಲಿ 2,023 ಜನರು ಕೊರೊನಾವೈರಸ್ ಸೋಂಕಿಗೆ ಬಲಿಯಾಗಿದ್ದರೆ, 1,67,457 ಸೋಂಕಿತರು ಗುಣಮುಖರಾಗಿದ್ದರು. ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1,56,16,130ಕ್ಕೆ ಏರಿಕೆಯಾಗಿದೆ. ಈವರೆಗೂ 1,32,76,039 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಸಾವಿನ ಸಂಖ್ಯೆ 1,82,553ಕ್ಕೆ ಏರಿಕೆಯಾಗಿತ್ತು. ಗುರುವಾರದ ವೇಳೆೆ ದೇಶದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಚಿತ್ರಣ ಸಂಪೂರ್ಣ ಬದಲಾಗಿದೆ.

24 ಗಂಟೆಗಳಲ್ಲಿ 16 ಲಕ್ಷ ಜನರಿಗೆ ಕೊವಿಡ್-19 ತಪಾಸಣೆ
ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪತ್ತೆಗೆ ತಪಾಸಣೆ ವೇಗವನ್ನು ಹೆಚ್ಚಿಸಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 16,51,711 ಜನರ ಮಾದರಿಯನ್ನು ತಪಾಸಣೆಗೊಳಪಡಿಸಲಾಗಿದೆ. ದೇಶದಲ್ಲಿ ಈವರೆಗೂ 27,27,05,103 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

ಭಾರತದಲ್ಲಿ ಈವರೆಗೂ ಲಸಿಕೆ ಪಡೆದವರೆಷ್ಟು ಮಂದಿ?
ದೇಶದಲ್ಲಿ ಈವರೆಗೆ 13,23,30,644 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಈವರೆಗೂ 92,19,080 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 58,51,361 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,16,28,882 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ59,32,541 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.
ನಾಲ್ಕನೇ ಹಂತದಲ್ಲಿ ಏಪ್ರಿಲ್ 1ರಿಂದ 45 ವರ್ಷಕ್ಕಿಂತ ಮೇಲ್ಪಟ್ಟರಿಗೆ ಕೊರೊನಾವೈರಸ್ ಲಸಿಕೆ ನೀಡುವಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಆದೇಶಿಸಿದೆ. ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 4,43,89,584 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 16,28,837 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 4,78,44,204 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 57,45,863 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ದೇಶದಲ್ಲಿ ಮೂರು ಮಾದರಿ ಕೊರೊನಾ ಲಸಿಕೆ ವಿತರಣೆ
ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಇದರ ಮಧ್ಯೆ ಮಾಸ್ಕೋ, ರಷ್ಯಾದಲ್ಲಿ ಗಮಲೇಯ ನ್ಯಾಷನಲ್ ರಿಸರ್ಚ್ ಇನ್ಸ್ ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಅಭಿವೃದ್ಧಿಪಡಿಸಿದ ಸ್ಪುಟ್ನಿಕ್-ವಿ ಲಸಿಕೆ ವಿತರಿಸುವುದಕ್ಕೂ ಅನುಮೋದನೆ ನೀಡಲಾಗಿದೆ.












Click it and Unblock the Notifications