Get Updates
Get notified of breaking news, exclusive insights, and must-see stories!

ಕೊರೊನಾವೈರಸ್ ಭೀತಿ: ಭಾರತದಲ್ಲಿ ಒಂದೇ ದಿನ 31923 ಮಂದಿಗೆ ಅಂಟಿದ ಮಹಾಮಾರಿ!

ನವದೆಹಲಿ, ಸಪ್ಟೆಂಬರ್ 23: ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ಪರೀಕ್ಷೆ ಪ್ರಮಾಣ ಕಡಿಮೆಯಾಗಿದ್ದರೂ ಹೊಸ ಪ್ರಕರಣಗಳ ಸಂಖ್ಯೆ ಯಥಾವತ್ತಾಗಿ ಏರಿಕೆಯಾಗುತ್ತಿದೆ. 24 ಗಂಟೆಗಳಲ್ಲೇ ಸೋಂಕಿತ ಪ್ರಕರಣಗಳ ನಡುವೆ ಸುಮಾರು ಐದು ಸಾವಿರಕ್ಕಿಂತ ಹೆಚ್ಚಿನ ವ್ಯತ್ಯಾಸ ಕಂಡು ಬಂದಿದೆ.

ದೇಶದಲ್ಲಿ ಮಂಗಳವಾರ ಒಂದು ದಿನದಲ್ಲಿ 26,964 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿತ್ತು. ಆದರೆ ಕಳೆದ 24 ಗಂಟೆಗಳಲ್ಲಿ ಹೊಸ ಸೋಂಕಿತ ಪ್ರಕರಣಗಳ ಸಂಖ್ಯೆ 31,923ಕ್ಕೆ ಏರಿಕೆಯಾಗಿದೆ. ಇದೇ ಅವಧಿಯಲ್ಲಿ 282 ಮಂದಿ ಮಹಾಮಾರಿಗೆ ಬಲಿಯಾಗಿದ್ದರೆ, 31,990 ಸೋಂಕಿತರು ಗುಣಮುಖರಾಗಿದ್ದಾರೆ.

ಗುರುವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಕೊರೊನಾವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆ 3,01,604 ಆಗಿದ್ದು, ಇದು ಕಳೆದ 187 ದಿನಗಳಲ್ಲೇ ಅತ್ಯಂತ ಕನಿಷ್ಠ ಎಂದು ಗೊತ್ತಾಗಿದೆ. ಇದರ ಹೊರತಾಗಿ ದೇಶದಲ್ಲಿ 3,28,15,731 ಮಂದಿ ಸೋಂಕಿತರು ಗುಣಮುಖರಾಗಿದ್ದು, 4,46,050 ಜನರು ಮಹಾಮಾರಿಯಿಂದಲೇ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೊರೊನಾವೈರಸ್ ಪರೀಕ್ಷೆ ಕುರಿತು ಮಾಹಿತಿ

ಕೊರೊನಾವೈರಸ್ ಪರೀಕ್ಷೆ ಕುರಿತು ಮಾಹಿತಿ

ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 15,27,443 ಜನರಿಗೆ ಕೊವಿಡ್-19 ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ದೇಶದಲ್ಲಿ ಈವರೆಗೂ 55,83,67,013 ಜನರಿಗೆ ಕೊರೊನಾವೈರಸ್ ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

83.39 ಕೋಟಿ ಮಂದಿಗೆ ಕೊರೊನಾವೈರಸ್ ಲಸಿಕೆ ವಿತರಣೆ

83.39 ಕೋಟಿ ಮಂದಿಗೆ ಕೊರೊನಾವೈರಸ್ ಲಸಿಕೆ ವಿತರಣೆ

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಭೀತಿಯಲ್ಲಿ ಲಸಿಕೆ ವಿತರಣೆ ಅಭಿಯಾನವನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ದೇಶದಲ್ಲಿ 83.39 ಕೋಟಿಗೂ ಅಧಿಕ ಮಂದಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 250 ದಿನಗಳಾಗಿದೆ. ದೇಶದಲ್ಲಿ ಈವರೆಗೂ 83,39,90,049 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ. ಕೇಂದ್ರ ಸರ್ಕಾರದಿಂದ ದೇಶದ ವಿವಿಧ ರಾಜ್ಯ ಮತ್ತು ಕೇಂದ್ರಾಡಲಿತ ಪ್ರದೇಶಗಳಿಗೆ ಈವರೆಗೂ 80,67,26,335 ಡೋಸ್ ಲಸಿಕೆ ಪೂರೈಕೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಹಂತವಾರು ಲಸಿಕೆ ವಿತರಣೆ ಪ್ರಮಾಣ ಎಷ್ಟಿದೆ?

ಹಂತವಾರು ಲಸಿಕೆ ವಿತರಣೆ ಪ್ರಮಾಣ ಎಷ್ಟಿದೆ?

ಕೊರೊನಾವೈರಸ್ ಎರಡನೇ ಅಲೆಯಲ್ಲಿ ಅತಿಹೆಚ್ಚು ಸೋಂಕು ತಗುಲಿರುವುದು ಹಾಗೂ ಸಾವಿನ ಸಂಖ್ಯೆಯಲ್ಲಿ ಅತಿಹೆಚ್ಚು ಮಧ್ಯವಯಸ್ಕರ ಸಂಖ್ಯೆಯೇ ಹೆಚ್ಚಾಗಿದೆ. 1,03,70,167 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 87,83,665 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,83,47,221 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 1,46,66,596 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

18 ವರ್ಷ ಮೇಲ್ಪಟ್ಟ 33,74,76,070 ಮಂದಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 6,67,81,067 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ವಿತರಿಸಲಾಗಿದೆ. 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ವಿತರಣೆಯಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ದೇಶದಲ್ಲಿ ಈವರೆಗೂ 45 ವರ್ಷ ಮೇಲ್ಪಟ್ಟ 15,36,39,648 ಜನರಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 7,14,56,603 ಮಂದಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ. ದೇಶದಲ್ಲಿ ಈವರೆಗೂ 61,81,01,021 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 21,52,45,655 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

Recommended Video

    ಕೊರೊನಾದಿಂದ ಸಾವನ್ನಪ್ಪಿದವರಿಗೆ 50,000 ಪರಿಹಾರ-ಕೇಂದ್ರ ಸರ್ಕಾರದಿಂದ ಸುಪ್ರೀಂಕೋರ್ಟ್ ಗೆ ಮಾಹಿತಿ | Oneindia Kannada
    ಕೇಂದ್ರ ಸರ್ಕಾರ ಪೂರೈಸಿರುವ ಕೊರೊನಾವೈರಸ್ ಲಸಿಕೆ

    ಕೇಂದ್ರ ಸರ್ಕಾರ ಪೂರೈಸಿರುವ ಕೊರೊನಾವೈರಸ್ ಲಸಿಕೆ

    2021ರ ಸಪ್ಟೆಂಬರ್ 22ರ ಅಂಕಿ-ಅಂಶಗಳ ಪ್ರಕಾರ, 80,67,26,335 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಈ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.

    * ಪೂರೈಕೆಯಾದ ಲಸಿಕೆ ಪ್ರಮಾಣ - 80,67,26,335

    * ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 64,00,000

    * ಕೊವಿಡ್-19 ಲಸಿಕೆಯ ಲಭ್ಯತೆ - 4,29,03,090

    More From
    Prev
    Next
    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+