ದೇಶದಲ್ಲಿ ಕೊರೊನಾ ಕೊಂಚ ಇಳಿಕೆ; 3,23,144 ಪ್ರಕರಣ ದಾಖಲು
ನವದೆಹಲಿ, ಏಪ್ರಿಲ್ 27: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 3,23,144 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಒಂದೇ ದಿನ 2771 ಜನರು ಸಾವನ್ನಪ್ಪಿದ್ದು, 2,51,827 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಸೋಮವಾರ ದೇಶದಲ್ಲಿ 3,52,991 ಕೊರೊನಾ ಸೋಂಕು ದಾಖಲಾಗಿತ್ತು. ಇಂದು ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಇಳಿಮುಖವಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಕಳೆದ 24 ಗಂಟೆಗಳಲ್ಲಿ ದಾಖಲಾದ ಈ ಪ್ರಕರಣಗಳೊಂದಿಗೆ ದೇಶದಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 1,76,36,307ಕ್ಕೆ ಏರಿಕೆಯಾಗಿದೆ. ದೇಶದಲ್ಲಿನ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 28,82,204 ಆಗಿದೆ.

ದೇಶದಲ್ಲಿ ಇದುವರೆಗೂ ಕೊರೊನಾ ಸೋಂಕಿನಿಂದ 1,45,56,209 ಮಂದಿ ಗುಣಮುಖರಾಗಿದ್ದಾರೆ. ಒಟ್ಟಾರೆ 1,97,894 ಮಂದಿ ಮೃತಪಟ್ಟಿದ್ದಾರೆ. ಜನವರಿ 16ರಿಂದ ಏಪ್ರಿಲ್ 26ರವರೆಗೆ14,52,71,186 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ.
ಏಪ್ರಿಲ್ 26ರವರೆಗೆ 28,09,79,877 ಮಾದರಿಗಳ ಕೋವಿಡ್ ಪರೀಕ್ಷೆಗಳನ್ನು ಮಾಡಲಾಗಿದೆ. ಏಪ್ರಿಲ್ 26ರ ಸೋಮವಾರ 16,58,700 ಮಾದರಿಗಳ ಕೊರೊನಾ ಪರೀಕ್ಷೆ ಮಾಡಲಾಗಿದೆ ಎಂದು ಐಸಿಎಂಆರ್ ಹೇಳಿದೆ.
ಕರ್ನಾಟಕದಲ್ಲಿ ಕೊರೊನಾ ಪ್ರಕರಣ: ರಾಜ್ಯದಲ್ಲಿ ಸೋಮವಾರ 29744 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 201 ಮಂದಿ ಸೋಂಕಿಗೆ ಬಲಿಯಾಗಿದ್ದರೆ, ಇದೇ ಅವಧಿಯಲ್ಲಿ 10663 ಸೋಂಕಿತರು ಗುಣಮುಖರಾಗಿದ್ದಾರೆ.












Click it and Unblock the Notifications