ಭಾರತದಲ್ಲಿ ಕುಸಿದ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ: ಚೇತರಿಕೆಯಲ್ಲಿ ಏರಿಕೆ

ನವದೆಹಲಿ, ಮೇ 15: ಭಾರತ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,26,098 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ವೇಳೆ 3,890 ಕೊವಿಡ್-19 ಸೋಂಕಿತರು ಮಹಾಮಾರಿಯಿಂದ ಸಾವನ್ನಪ್ಪಿದ್ದು, 3,53,299 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.

ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ ಶುಕ್ರವಾರದ ವೇಳೆಗೆ ಭಾರತದಲ್ಲಿ ಒಟ್ಟು 2,43,72,907 ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 2,04,32,898 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಗೆ ಈವರೆಗೂ 2,66,207 ಜನರು ಬಲಿಯಾಗಿದ್ದಾರೆ.

ಇದರ ಹೊರತಾಗಿ ದೇಶದಲ್ಲಿ ಇನ್ನೂ 36,73,802 ಕೊರೊನಾ ವೈರಸ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ ದೇಶದಲ್ಲಿ 18,04,57,579 ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

3,26,098 New Coronavirus Cases Reported In India In The Last 24 Hours

ಗರಿಷ್ಠ ಕೋವಿಡ್ ಪ್ರಕರಣಗಳನ್ನು ದಾಖಲಿಸಿದ ಅಗ್ರ ಐದು ರಾಜ್ಯಗಳಲ್ಲಿ 41,779 ಪ್ರಕರಣಗಳೊಂದಿಗೆ ಕರ್ನಾಟಕ ಮೊದಲ ಸ್ಥಾನದಲ್ಲಿದೆ. 39,923 ಪ್ರಕರಣಗಳೊಂದಿಗೆ ಮಹಾರಾಷ್ಟ್ರ ಎರಡನೆ ಸ್ಥಾನದಲ್ಲಿದ್ದರೆ, 34,694 ಪ್ರಕರಣಗಳೊಂದಿಗೆ ಕೇರಳ ಮೂರನೇ ಸ್ಥಾನ, ತಮಿಳುನಾಡು 31,892 ಪ್ರಕರಣಗಳೊಂದಿಗೆ ನಾಲ್ಕನೇ ಸ್ಥಾನ ಮತ್ತು ಐದನೇ ಸ್ಥಾನದಲ್ಲಿರುವ ಆಂಧ್ರಪ್ರದೇಶದಲ್ಲಿ 22,018 ಪ್ರಕರಣಗಳು ದಾಖಲಾಗಿವೆ.

ಮಹಾರಾಷ್ಟ್ರದಲ್ಲಿ (695) ಗರಿಷ್ಠ ಸಾವು-ನೋವು ಸಂಭವಿಸಿದ್ದರೆ, ನಂತರ ಸ್ಥಾನ ಕರ್ನಾಟಕದಲ್ಲಿ 373 ಸಾವುಗಳು ಸಂಭವಿಸಿವೆ. ಗರಿಷ್ಠ ಕೊರೊನಾ ಸೋಂಕು ಪ್ರಕರಣಗಳ ಪಟ್ಟಿಯಲ್ಲಿ ಕರ್ನಾಟಕವು ಅಗ್ರಸ್ಥಾನದಲ್ಲಿದೆ. ಹೊಸ ಪ್ರಕರಣಗಳಲ್ಲಿ ಶೇ.12.81 ರಷ್ಟು ದಾಖಲಾಗಿದೆ. ಮಹಾರಾಷ್ಟ್ರದ ಪಾಸಿಟಿವಿಟಿ ದರವು ಕುಸಿಯುತ್ತಿದ್ದರೆ, ಕರ್ನಾಟಕದಲ್ಲಿ ಹೆಚ್ಚಾಗಿದೆ. ದೆಹಲಿಯಲ್ಲಿ ಪರಿಸ್ಥಿತಿ ಸುಧಾರಿಸುತ್ತಿದ್ದು, ಹೊಸ ಪ್ರಕರಣಗಳು ಈಗ 10,000 ಕ್ಕಿಂತ ಕಡಿಮೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+