ಭಾರತದಲ್ಲಿ ಭೀತಿ: 1ನೇ ಅಲೆಯಲ್ಲಿ ಸೋಂಕು, 2ನೇ ಅಲೆಯಲ್ಲಿ ಸಾವು!?

ನವದೆಹಲಿ, ಮೇ 11: ಭಾರತದಲ್ಲಿ ಕೊರೊನಾವೈರಸ್ ಮೊದಲ ಅಲೆಗಿಂತ ಎರಡನೇ ಅಲೆ ಅಪಾಯಕಾರಿ ಎನ್ನುವುದು ಅಂಕಿ-ಅಂಶಗಳ ಸಮೇತ ಪದೇ ಪದೆ ಸಾಬೀತಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 3,876 ಮಂದಿ ಕೊವಿಡ್-19 ಸೋಂಕಿನಿಂದಲೇ ಪ್ರಾಣ ಬಿಟ್ಟಿದ್ದಾರೆ.

ದೇಶದಲ್ಲಿ ಒಂದೇ ದಿನ 3,29,942 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2,26,62,575ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಮಂಗಳವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಕೊರೊನಾವೈರಸ್ ಸೋಂಕಿನಿಂದ ಈವರೆಗೂ 2,49,99 ಜನರು ಜೀವ ಚೆಲ್ಲಿದ್ದಾರೆ. ಒಂದು ದಿನದಲ್ಲಿ 3,56,082 ಸೋಂಕಿತರು ಗುಣಮುಖರಾಗಿದ್ದು, ಈವರೆಗೆ 1,90,27,304 ಸೋಂಕಿತರು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರ ಹೊರತಾಗಿ ಭಾರತದಲ್ಲಿ 37,15,221 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ. ದೇಶದಲ್ಲಿ ಕೊರೊನಾವೈರಸ್ ಸೋಂಕಿತರ ತಪಾಸಣೆ, ಲಸಿಕೆ ವಿತರಣೆ ಹಂತಗಳು ಹಾಗೂ ಲಸಿಕೆ ಪ್ರಮಾಣದ ಕುರಿತು ಒಂದು ವರದಿ ಇಲ್ಲಿದೆ.

ಒಂದೇ ದಿನ 18.50 ಲಕ್ಷ ಜನರಿಗೆ ಕೊವಿಡ್-19 ತಪಾಸಣೆ

ಒಂದೇ ದಿನ 18.50 ಲಕ್ಷ ಜನರಿಗೆ ಕೊವಿಡ್-19 ತಪಾಸಣೆ

ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪತ್ತೆಗೆ ತಪಾಸಣೆ ವೇಗವನ್ನು ಹೆಚ್ಚಿಸಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 18,50,110 ಜನರ ಮಾದರಿಯನ್ನು ತಪಾಸಣೆಗೊಳಪಡಿಸಲಾಗಿದೆ. ದೇಶದಲ್ಲಿ ಈವರೆಗೂ 30,56,00,187 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

ದೇಶದಲ್ಲಿ ಮೂರು ಹಂತಗಳ ಕೊವಿಡ್ ಲಸಿಕೆ ವಿತರಣೆ

ದೇಶದಲ್ಲಿ ಮೂರು ಹಂತಗಳ ಕೊವಿಡ್ ಲಸಿಕೆ ವಿತರಣೆ

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆ ವೇಗಕ್ಕೆ ಕಡಿವಾಣ ಹಾಕಲು ಮೂರು ಹಂತಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರು, ಎರಡನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಹಾಗೂ ಮೂರನೇ ಹಂತದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ.

ಯಾವ ಹಂತದಲ್ಲಿ ಯಾರಿಗೆಷ್ಟು ಲಸಿಕೆ ವಿತರಣೆ?

ಯಾವ ಹಂತದಲ್ಲಿ ಯಾರಿಗೆಷ್ಟು ಲಸಿಕೆ ವಿತರಣೆ?

ಕಳೆದ ಮೇ 1ರಿಂದ ಈವರೆಗೂ 18 ವರ್ಷ ಮೇಲ್ಪಟ್ಟ 44 ವರ್ಷದೊಳಗಿನ 25,52,843 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ಭಾರತದಲ್ಲಿ ಈವರೆಗೂ 95,63,406 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 65,05,072 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,40,49,681 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 78,51,075 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 5,54,97,658 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 71,73,939 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 5,38,00,706 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 1,56,39,381 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ದೇಶದಲ್ಲಿ ಮೂರು ಮಾದರಿ ಕೊರೊನಾ ಲಸಿಕೆ ವಿತರಣೆ

ದೇಶದಲ್ಲಿ ಮೂರು ಮಾದರಿ ಕೊರೊನಾ ಲಸಿಕೆ ವಿತರಣೆ

ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೀರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಇದರ ಮಧ್ಯೆ ಮಾಸ್ಕೋ, ರಷ್ಯಾದಲ್ಲಿ ಗಮಲೇಯ ನ್ಯಾಷನಲ್ ರಿಸರ್ಚ್ ಇನ್ಸ್ ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಅಭಿವೃದ್ಧಿಪಡಿಸಿದ ಸ್ಪುಟ್ನಿಕ್-ವಿ ಲಸಿಕೆ ವಿತರಿಸುವುದಕ್ಕೂ ಅನುಮೋದನೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+