Indian immigrants: ಅಮೆರಿಕದಿಂದ ಗುಜರಾತಿಗೆ ಬಂದಿಳಿದ 33 ಅಕ್ರಮ ವಲಸಿಗರು
Indian immigrants: ಅಮೆರಿಕದಿಂದ ಗಡೀಪಾರಾಗಿರುವ 104 ಭಾರತೀಯರು ಬುಧವಾರ ಪಂಜಾಬ್‌ನ ಅಮೃತಸರ ವಿಮಾನ ನಿಲ್ದಾನಕ್ಕೆ ಬಂದಿಳಿದರು. ಅಮೆರಿಕದಿಂದ ಬಂದವರ ಪೈಕಿ 33 ಜನರು ಗುಜರಾತ್ ಮೂಲದವರಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಇವರನ್ನು ಹೊತ್ತ ವಿಮಾನವು ಗುರುವಾರ ಬೆಳಿಗ್ಗೆ ಅಮೃತಸರದಿಂದ ಅಹಮದಾಬಾದ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಮಕ್ಕಳು ಹಾಗೂ ಮಹಿಳೆಯರು ಸೇರಿದಂತೆ 33 ವಲಸಿಗರನ್ನು ಪೊಲೀಸ್ ವಾಹನಗಳಲ್ಲಿ ಅವರವರ ಮನೆಗಳಿಗೆ ತಲುಪಿಸಲಾಗಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ ಆರ್‌ಡಿ ಓಜಾ ತಿಳಿಸಿದರು.

ಈ ಕುರಿತು ಮಾಧ್ಯಮಗೋಷ್ಠಿ ನಡೆಸಿದ ಆರ್‌ಡಿ ಓಜಾ ಅವರು, 'ಮಕ್ಕಳು ಮತ್ತು ಮಹಿಳೆಯರು ಸೇರಿದಂತೆ 33 ಗುಜರಾತಿ ವಲಸಿಗರನ್ನು ಹೊತ್ತ ವಿಮಾನವು ಬೆಳಿಗ್ಗೆ ಅಮೃತಸರದಿಂದ ಅಹಮದಾಬಾದ್ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು. ಅಮೆರಿಕದಿಂದ ಗಡೀಪಾರು ಮಾಡಲಾದವರಲ್ಲಿ 33 ಜನರು ಗುಜರಾತಿಗಳಾಗಿದ್ದಾರೆ. ಅವರನ್ನು ಅವರವರ ಮನೆಗಳಿಗೆ ಸಾಗಿಸಲು ನಾವು ವಿಮಾನ ನಿಲ್ದಾಣದಲ್ಲಿ ಪೊಲೀಸ್ ವಾಹನಗಳನ್ನು ನಿಯೋಜಿಸಿದ್ದೆವು' ಎಂದು ಸುದ್ದಿಗಾರರಿಗೆ ತಿಳಿಸಿದರು.
ಗಡೀಪಾರು ಮಾಡಲಾದ ವಲಸಿಗರೊಂದಿಗೆ ಮಾಧ್ಯಮ ಪ್ರತಿನಿಧಿಗಳು ಮಾತನಾಡಲು ಪ್ರಯತ್ನಿಸಿದಾಗ ಸಂದರ್ಭದಲ್ಲಿ ವಲಸಿಗರು ಏನನ್ನೂ ಹೇಳಲು ನಿರಾಕರಿಸಿದರು ಎಂದು ತಿಳಿದುಬಂದಿದೆ. ಆ ನಂತರ ಪೊಲೀಸ್ ವಾಹನಗಳಲ್ಲಿ ತಮ್ಮ ತಮ್ಮ ಊರುಗಳಿಗೆ ತೆರಳಿದರು ಎಂಬುದಾಗಿ ವರದಿಯಾಗಿದೆ.
ಅಕ್ರಮ ವಲಸಿಗರಲ್ಲಿ ಹೆಚ್ಚಿನವರು ಮೆಹ್ಸಾನಾ, ಗಾಂಧಿನಗರ, ಪಠಾಣ್, ವಡೋದರಾ ಮತ್ತು ಖೇಡಾ ಜಿಲ್ಲೆಗಳವರು ಎಂದು ಮೂಲಗಳು ತಿಳಿಸಿವೆ. ಗುಜರಾತಿನ 33 ಮಂದಿ ಸೇರಿದಂತೆ 104 ಅಕ್ರಮ ಭಾರತೀಯ ವಲಸಿಗರನ್ನು ಹೊತ್ತ ಅಮೆರಿಕದ ಮಿಲಿಟರಿ ವಿಮಾನವು ಬುಧವಾರ ಪಂಜಾಬ್‌ನ ಅಮೃತಸರದಲ್ಲಿ ಬಂದಿಳಿಯಿತು.
ಮಾಧ್ಯಮಗಳೊಂದಿಗೆ ಮಾತನಾಡಿದ ಅಕ್ರಮ ವಲಸಿಗರ ಕುಟುಂಬ ಸದಸ್ಯರು, ತಮ್ಮ ಸಂಬಂಧಿಗಳು ಅಮೆರಿಕವನ್ನು ಹೇಗೆ ತಲುಪಿದರು ಎಂಬುದಾಗಿ ತಿಳಿದಿಲ್ಲ ಎಂದು ಹೇಳಿಕೊಂಡಿದ್ದಾರೆ.
ಅಕ್ರಮ ವಲಸಿಗರ ಕುರಿತು ಮಾತನಾಡಿರುವ ಗುಜರಾತಿನ ಮಾಜಿ ಉಪಮುಖ್ಯಮಂತ್ರಿ ನಿತಿನ್ ಪಟೇಲ್ ಅವರು ಗಡೀಪಾರು ಮಾಡಲಾದ ಗುಜರಾತಿಗಳ ಬಗ್ಗೆ ಸಹಾನುಭೂತಿ ವ್ಯಕ್ತಪಡಿಸಿದ್ದಾರೆ. ಅಕ್ರಮ ವಲಸಿಗರು ಉದ್ಯೋಗ ಅಥವಾ ವೃತ್ತಿಜೀವನವನ್ನು ಹುಡುಕಿಕೊಂಡು ವಿದೇಶಕ್ಕೆ ತೆರಳಿದ್ದಾರೆ ಎಂಬುದಾಗಿ ತಿಳಿಸಿದರು.
ಅಪರಾಧ ವಿಭಾಗದ ಉಪ ಪೊಲೀಸ್ ಮಹಾನಿರ್ದೇಶಕಿ ಪರೀಕ್ಷಿತಾ ರಾಥೋಡ್ ಮಾತನಾಡಿ, ಅಮೆರಿಕದಿಂದ ಗಡೀಪಾರು ಮಾಡಲಾದವರನ್ನು ನಾವು ವಿಚಾರಣೆಗೆ ಒಳಪಡಿಸುವುದಿಲ್ಲವೆಂದು ಹೇಳಿದರು.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications