Breaking; ಭಾರತದಲ್ಲಿ 3,303 ಹೊಸ ಕೋವಿಡ್ ಪ್ರಕರಣ ದಾಖಲು

ನವದೆಹಲಿ, ಏಪ್ರಿಲ್ 28; ಭಾರತದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಏರಿಕೆ ಕಂಡುಬಂದಿದೆ. 24 ಗಂಟೆಗಳ ಅವಧಿಯಲ್ಲಿ 3303 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಹೆಲ್ತ್ ಬುಲೆಟಿನ್ ಪ್ರಕಾರ ಭಾರತದಲ್ಲಿ 24 ಗಂಟೆಯಲ್ಲಿ 2,563 ಜನರು ಗುಣಮುಖಗೊಂಡಿದ್ದಾರೆ. ದಿನದ ಪಾಸಿಟಿವಿಟಿ ದರ ಶೇ 0.66 ಆಗಿದೆ.

ದೇಶದ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 16,980 ಆಗಿದೆ. ಇದುವರೆಗೂ ಗುಣಮುಖರಾದವರ ಸಂಖ್ಯೆ 42528126 ಮತ್ತು ಸಾವನ್ನಪ್ಪಿದವರ ಸಂಖ್ಯೆ 523693 ಆಗಿದೆ ಎಂದು ಹೆಲ್ತ್ ಬುಲೆಟಿನ್ ಹೇಳಿದೆ.

3303 New Covid Cases Reported In India IN 24 Hours

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಬುಧವಾರ 1367 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಮಂಗಳವಾರಕ್ಕೆ ಹೋಲಿಕೆ ಮಾಡಿದರೆ ಹೊಸ ಪ್ರಕರಣಗಳು ಶೇ 13ರಷ್ಟು ಏರಿಕೆ ಕಂಡಿದೆ.

ವಿವಿಧ ರಾಜ್ಯಗಳ ಕೋವಿಡ್ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆಯಲು ಪ್ರಧಾನಿ ನರೇಂದ್ರ ಮೋದಿ ಬುಧವಾರ ಮುಖ್ಯಮಂತ್ರಿಗಳೊಂದಿಗೆ ಸಂವಾದ ನಡೆಸಿದರು. ಸಭೆಯಲ್ಲಿ ಉಪಸ್ಥಿತರಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಹ ಕೆಲವು ರಾಜ್ಯಗಳಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಇತ್ತೀಚಿನ ದಿನ ಹೆಚ್ಚಾಗುತ್ತಿರುವ ಕುರಿತು ಮಾತನಾಡಿದರು.

ಪರೀಕ್ಷೆ, ಪತ್ತೆ, ಚಿಕಿತ್ಸೆ, ಲಸಿಕೆ ಮತ್ತು ಕೋವಿಡ್ ಸೂಕ್ತ ನಡವಳಿಕೆ ಪಾಲನೆಯನ್ನು ಖಾತ್ರಿಪಡಿಸಿಕೊಳ್ಳುವ ಅಗತ್ಯವಿದೆ ಎಂದು ಅಮಿತ್ ಶಾ ಹೇಳಿದರು. ಕೇಂದ್ರ ಆರೋಗ್ಯ ಕಾರ್ಯದರ್ಶಿ ವಿಶ್ವದ ಹಲವು ದೇಶಗಳಲ್ಲಿ ಸೋಂಕು ಪ್ರಕರಣಗಳ ಹೆಚ್ಚಳದ ಬಗ್ಗೆ ಸಭೆಯಲ್ಲಿ ಚರ್ಚಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+