ಹೊಸ ದಾಖಲೆ: ಭಾರತದಲ್ಲಿ ಒಂದೇ ದಿನ 3,32,730 ಮಂದಿಗೆ ಕೊರೊನಾವೈರಸ್!

ನವದೆಹಲಿ, ಏಪ್ರಿಲ್ 23: ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ಎರಡನೇ ಅಲೆ ಭಯಂಕರವಾಗುತ್ತಿದೆ. ಪ್ರತಿನಿತ್ಯ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆಯು ಹೊಸ ದಾಖಲೆಯನ್ನೇ ಬರೆಯುತ್ತಿವೆ. ಮೊನ್ನೆಗಿಂತ ನಿನ್ನೆ, ನಿನ್ನೆಗಿಂತೆ ಇಂದು ಅತಿಹೆಚ್ಚು ಸೋಂಕಿತ ಪ್ರಕರಣಗಳು ವರದಿಯಾಗಿವೆ.

ದೇಶದಲ್ಲಿ ಒಂದೇ ದಿನ 3,32,730 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ 1,93,279 ಸೋಂಕಿತರು ಗುಣಮುಖರಾಗಿದ್ದರೆ, 2,263 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.

ಶುಕ್ರವಾರದ ಅಂಕಿ-ಅಂಶಗಳ ಪ್ರಕಾರ, ದೇಶದಲ್ಲಿ ಒಟ್ಟು 1,62,63,695 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈವರೆಗೂ 1,36,48,159 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 1,86,920 ಸಾವಿನ ಪ್ರಕರಣಗಳು ಪತ್ತೆಯಾಗಿವೆ. ಭಾರತದಲ್ಲಿ 24,28,616 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

 332730 New Coronavirus Cases Reported in India in the Last 24 Hours

ಭಾರತದಲ್ಲಿ ಈವರೆಗೂ ಲಸಿಕೆ ಪಡೆದವರೆಷ್ಟು ಮಂದಿ?

ದೇಶದಲ್ಲಿ ಈವರೆಗೆ 13,54,78,420 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಈವರೆಗೂ 92,41,384 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 59,03,368 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,17,27,708 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 60,73,622 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

ನಾಲ್ಕನೇ ಹಂತದಲ್ಲಿ ಏಪ್ರಿಲ್ 1ರಿಂದ 45 ವರ್ಷಕ್ಕಿಂತ ಮೇಲ್ಪಟ್ಟರಿಗೆ ಕೊರೊನಾವೈರಸ್ ಲಸಿಕೆ ನೀಡುವಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಆದೇಶಿಸಿದೆ. ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 4,55,10,426 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 18,91,160 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 4,85,01,906 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 64,97,155 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+