Breaking; ಭಾರತದಲ್ಲಿ 3 ಸಾವಿರದ ಗಡಿ ದಾಟಿದ ಹೊಸ ಕೋವಿಡ್ ಪ್ರಕರಣ
ನವದೆಹಲಿ, ಏಪ್ರಿಲ್ 29 ; ಭಾರತದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ. 24 ಗಂಟೆಯಲ್ಲಿ ಮೂರು ಸಾವಿರಕ್ಕೂ ಅಧಿಕ ಹೊಸ ಪ್ರಕರಣಗಳು ದೇಶದಲ್ಲಿ ದಾಖಲಾಗಿವೆ.
ಕೇಂದ್ರ ಆರೋಗ್ಯ ಸಚಿವಾಲಯದ ಹೆಲ್ತ್ ಬುಲೆಟಿನ್ ಪ್ರಕಾರ 24 ಗಂಟೆಯಲ್ಲಿ 3,377 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. 2,496 ಜನರು ಗುಣಮುಖಗೊಂಡಿದ್ದಾರೆ ಮತ್ತು 60 ಜನರು ಮೃತಪಟ್ಟಿದ್ದಾರೆ.
ಭಾರತದ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 17,801 ಆಗಿದೆ. ಗುಣಮುಖ ಪ್ರಮಾಣ ಶೇ 98.74ರಷ್ಟಿದೆ. ಇದುವರೆಗೂ ದೇಶದಲ್ಲಿ 42530622 ಜನರು ಗುಣಮುಖಗೊಂಡಿದ್ದಾರೆ. ಇದುವರೆಗೂ ಮೃತಪಟ್ಟವರು 523753.

ದೇಶದಲ್ಲಿ 24 ಗಂಟೆಯಲ್ಲಿ 701 ಸಕ್ರಿಯ ಪ್ರಕರಣಗಳು ಏರಿಕೆಯಾಗಿವೆ. ಅಲ್ಲದೇ 39 ಜನರು ಮೃತಪಟ್ಟಿದ್ದಾರೆ. ಗುರುವಾರಕ್ಕೆ ಹೋಲಿಕೆ ಮಾಡಿದರೆ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ.
ಗುರುವಾರ ತೆಲಂಗಾಣದಲ್ಲಿ 40 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ ಹೈದರಾಬಾದ್ ನಗರದಲ್ಲಿಯೇ 21 ಪ್ರಕರಣ ಪತ್ತೆಯಾಗಿದೆ.
ಕರ್ನಾಟಕದಲ್ಲಿ ಗುರುವಾರ 154 ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿದೆ. ರಾಜ್ಯದ ಸಕ್ರಿಯ ಕೋವಿಡ್ ಪ್ರಕರಣಗಳು 1751 ಆಗಿದೆ. ಬೆಂಗಳೂರು ನಗರದಲ್ಲಿಯೇ 142 ಪ್ರಕರಣ ದಾಖಲಾಗಿದೆ.
ಗುರುವಾರ ದೆಹಲಿಯಲ್ಲಿ 1490 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಪಾಸಿಟಿವಿಟಿ ದರ ಶೇ 4.62 ಆಗಿದೆ. ಪಶ್ಚಿಮ ಬಂಗಾಳದಲ್ಲಿ 52 ಹೊಸ ಪ್ರಕರಣ ದಾಖಲಾಗಿದೆ.












Click it and Unblock the Notifications