ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ ಕೊರೊನಾವೈರಸ್ ಪ್ರಕರಣಗಳ ಇಳಿಮುಖದ ಹಿಂದಿನ ಮರ್ಮ?

|
Google Oneindia Kannada News

ನವದೆಹಲಿ, ಮೇ 14: ಭಾರತದಲ್ಲಿ ಪ್ರತಿನಿತ್ಯ 4 ಲಕ್ಷದ ಗಡಿ ದಾಟುತ್ತಿದ್ದ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 3.43ಕ್ಕೆ ಇಳಿಮುಖವಾಗಿದೆ. ಹಾಗೆಂದ ಮಾತ್ರಕ್ಕೆ ಕೊವಿಡ್-19 ಪ್ರಭಾವ ಕಡಿಮೆಯಾಗಿದೆ ಎಂದು ಭಾವಿಸುವಂತಿಲ್ಲ. ಏಕೆಂದರೆ ಸೋಂಕು ತಪಾಸಣೆ ಪ್ರಮಾಣದಲ್ಲಿ ಇಳಿಕೆಯಾಗಿರುವುದೇ ಈ ಅಂಕಿ-ಸಂಖ್ಯೆಗಳ ಹಿಂದಿನ ಮರ್ಮವಾಗಿದೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,43,144 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 4,000 ಮಂದಿ ಕೊವಿಡ್-19 ಸೋಂಕಿತರು ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದು, 3,44,776 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಮೇ ಅಂತ್ಯದ ತನಕ ಲಸಿಕೆ ಸಿಗಲ್ಲ; ಸುಪ್ರೀಂಗೆ 9 ರಾಜ್ಯಗಳ ಅಫಿಡೆವಿಟ್ಮೇ ಅಂತ್ಯದ ತನಕ ಲಸಿಕೆ ಸಿಗಲ್ಲ; ಸುಪ್ರೀಂಗೆ 9 ರಾಜ್ಯಗಳ ಅಫಿಡೆವಿಟ್

ಶುಕ್ರವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಒಟ್ಟು2,40,46,809 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 2,00,79,599 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಗೆ ಈವರೆಗೂ 2,62,317 ಜನರು ಬಲಿಯಾಗಿದ್ದಾರೆ. ಇದರ ಹೊರತಾಗಿ 37,04,893 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

 343144 New Coronavirus Cases Reported in India in the Last 24 Hours

ಒಂದೇ ದಿನ ಎಷ್ಟು ಜನರಿಗೆ ಕೊವಿಡ್-19 ತಪಾಸಣೆ?

ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪತ್ತೆಗೆ ತಪಾಸಣೆ ವೇಗವನ್ನು ಹೆಚ್ಚಿಸಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 18,75,515 ಜನರ ಮಾದರಿಯನ್ನು ತಪಾಸಣೆಗೊಳಪಡಿಸಲಾಗಿದೆ. ದೇಶದಲ್ಲಿ ಈವರೆಗೂ 31,13,24,100 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

Recommended Video

Covidನಿಂದ ಗುಣಮುಖರಾದವರು ತಕ್ಷಣ ಲಸಿಕೆ ತೆಗೆದುಕೊಳ್ಳಬೇಡಿ | Oneindia Kannada

English summary
343144 New Coronavirus Cases Reported in India in the Last 24 Hours.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X