ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಪಾಯಕಾರಿ ಕೊರೊನಾ: ಭಾರತದಲ್ಲಿ ಒಂದೇ ದಿನ 4005 ಮಂದಿ ಸಾವು!

|
Google Oneindia Kannada News

ನವದೆಹಲಿ, ಮೇ 12: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಯು ಯಮಸ್ವರೂಪಿ ಆಗಿದೆ. ಭಾರತದಲ್ಲಿ ಮೊದಲ ಬಾರಿಗೆ ಒಂದೇ ದಿನ 4,000ಕ್ಕೂ ಅಧಿಕ ಮಂದಿ ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ.

ಕಳೆದ 24 ಗಂಟೆಗಳಲ್ಲಿ 3,48,421 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 4,005 ಜನರು ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟಿದ್ದರೆ, ಒಂದೇ ದಿನ 3,55,338 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಭಾರತದ 13 ರಾಜ್ಯದಲ್ಲಿ ಸಕ್ರಿಯ ಪ್ರಕರಣ 1 ಲಕ್ಷಕ್ಕೂ ಅಧಿಕ ಭಾರತದ 13 ರಾಜ್ಯದಲ್ಲಿ ಸಕ್ರಿಯ ಪ್ರಕರಣ 1 ಲಕ್ಷಕ್ಕೂ ಅಧಿಕ

ಬುಧವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಒಟ್ಟು 2,33,40,938 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 1,93,82,642 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಯಿಂದ ಒಟ್ಟು 2,54,197 ಜನರು ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ 37,04,099 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ ಎಂದು ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಒಂದೇ ದಿನ 19.83 ಲಕ್ಷ ಜನರಿಗೆ ಕೊವಿಡ್-19 ತಪಾಸಣೆ

ಒಂದೇ ದಿನ 19.83 ಲಕ್ಷ ಜನರಿಗೆ ಕೊವಿಡ್-19 ತಪಾಸಣೆ

ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪತ್ತೆಗೆ ತಪಾಸಣೆ ವೇಗವನ್ನು ಹೆಚ್ಚಿಸಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 19,83,804 ಜನರ ಮಾದರಿಯನ್ನು ತಪಾಸಣೆಗೊಳಪಡಿಸಲಾಗಿದೆ. ದೇಶದಲ್ಲಿ ಈವರೆಗೂ 30,75,83,991 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

ಮೂರು ಹಂತಗಳಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ

ಮೂರು ಹಂತಗಳಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆ ವೇಗಕ್ಕೆ ಕಡಿವಾಣ ಹಾಕಲು ಮೂರು ಹಂತಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರು, ಎರಡನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಹಾಗೂ ಮೂರನೇ ಹಂತದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 116 ದಿನಗಳೇ ಕಳೆದಿದ್ದು, ಈವರೆಗೂ17,52,35,991 ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ.

18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ

18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ

ಕಳೆದ ಮೇ 1ರಿಂದ ಈವರೆಗೂ 18 ವರ್ಷ ಮೇಲ್ಪಟ್ಟ 44 ವರ್ಷದೊಳಗಿನ 30,39,287 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ಭಾರತದಲ್ಲಿ ಈವರೆಗೂ 95,81,872 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 65,38,656 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,41,45,083 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 79,50,430 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

ವೃದ್ಧರಿಗೆ ಕೊರೊನಾವೈರಸ್ ಲಸಿಕೆಯಲ್ಲಿ ಮೊದಲ ಆದ್ಯತೆ

ವೃದ್ಧರಿಗೆ ಕೊರೊನಾವೈರಸ್ ಲಸಿಕೆಯಲ್ಲಿ ಮೊದಲ ಆದ್ಯತೆ

ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 5,58,70,091 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 78,17,926 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 5,39,54,858 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 1,62,73,279 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

English summary
348421 New Coronavirus Cases Reported in India in the Last 24 Hours.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X